ಜಾರ್ಖಂಡ್: ಪ್ರಧಾನಿ ಮೋದಿ ಬೆಂಗಾವಲು ವಾಹನಕ್ಕೆ ಅಡ್ಡ ಬಂದ ಮಹಿಳೆಯ ಬಂಧನ
ಜಾರ್ಖಂಡ್‌ಗೆ ಎರಡು ದಿನಗಳ ಭೇಟಿಯ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಾವಲು ವಾಹನಕ್ಕೆ ಅಡ್ಡ ಬಂದ ಮಹಿಳೆಯನ್ನು ರಾಂಚಿ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ರಾಂಚಿ: ಜಾರ್ಖಂಡ್‌ಗೆ ಎರಡು ದಿನಗಳ ಭೇಟಿಯ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಾವಲು ವಾಹನಕ್ಕೆ ಅಡ್ಡ ಬಂದ ಮಹಿಳೆಯನ್ನು ರಾಂಚಿ ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಧನ್‌ಬಾದ್ ಎಸಿಬಿ ಇನ್ಸ್‌ಪೆಕ್ಟರ್ ವಿನೋದ್ ಕುಮಾರ್ ಪಾಸ್ವಾನ್ ಹೇಳಿಕೆಯನ್ನು ಆಧರಿಸಿ, ರಾಂಚಿಯ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಸಂಗೀತಾ ಝಾ ಎಂಬ ಮಹಿಳೆ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಘಟನೆಯ ನಂತರ ಎನ್‌ಎಸ್‌ಜಿ ರಾಂಚಿ ಪೊಲೀಸರಿಂದ ವರದಿ ಕೇಳಿತ್ತು.
ಪ್ರಧಾನಿ ಮೋದಿ ಅವರು ಭಗವಾನ್ ಬಿರ್ಸಾ ಮುಂಡಾ ಸ್ಮಾರಕ ವಸ್ತುಸಂಗ್ರಹಾಲಯಕ್ಕೆ ತೆರಳುತ್ತಿದ್ದಾಗ ಸಂಗೀತಾ ಝಾ ಎಂಬ ಮಹಿಳೆ ಇದ್ದಕ್ಕಿದ್ದಂತೆ ಬೆಂಗಾವಲು ವಾಹನಕ್ಕೆ ಅಡ್ಡ ಬಂದಿದ್ದಾರೆ. ಆದಾಗ್ಯೂ, ಮಹಿಳೆಯನ್ನು ತಕ್ಷಣವೇ ಪ್ರಧಾನಿಯ ಭದ್ರತೆಗಾಗಿ ನಿಯೋಜಿಸಲಾಗಿದ್ದ ಭದ್ರತಾ ಪಡೆಗಳು ಮಹಿಳೆಯನ್ನು ಹಿಡಿದು ಕಸ್ಟಡಿಗೆ ತೆಗೆದುಕೊಂಡರು. ಮಹಿಳೆ ಪ್ರಧಾನಿಯನ್ನು ಭೇಟಿಯಾಗಲು ಉತ್ಸುಕರಾಗಿದ್ದರು ಎಂದು ಹೇಳಲಾಗಿದೆ.
ಈ ಸಂಬಂಧ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಪ್ರಕಾರ, ಸಂಗೀತಾ ಝಾ ಅವರು ತೆಗೆದುಕೊಂಡ ಕ್ರಮಗಳು ಗಂಭೀರ ಅಪರಾಧದ ವರ್ಗಕ್ಕೆ ಸೇರುತ್ತವೆ. ಮಹಿಳೆ ವಿರುದ್ಧ ಐಪಿಸಿ ಸೆಕ್ಷನ್ 341,283,353,186 ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


