ಮಧ್ಯಪ್ರದೇಶ ವಿಧಾನಸಭೆ ಚುನಾವಣೆ: 3 ಗಂಟೆವರೆಗೆಗೆ ಶೇ.60.52 ಮತದಾನ; ಸಿಎಂ ರೇಸ್ ನಲ್ಲಿ ಇಲ್ಲ ಎಂದ ಜ್ಯೋತಿರಾಧಿತ್ಯ ಸಿಂಧಿಯಾ
ಮಧ್ಯಪ್ರದೇಶ ವಿಧಾನಸಭೆ ಚುನಾವಣೆಗೆ ಇಂದು ಮತದಾನ ನಡೆಯುತ್ತಿದ್ದು ಮಧ್ಯಾಹ್ನ 3 ಗಂಟೆ ಹೊತ್ತಿಗೆ ಶೇ.60.52ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.

ಭೋಪಾಲ್: ಮಧ್ಯಪ್ರದೇಶ ವಿಧಾನಸಭೆ ಚುನಾವಣೆಗೆ ಇಂದು ಮತದಾನ ನಡೆಯುತ್ತಿದ್ದು ಮಧ್ಯಾಹ್ನ 3 ಗಂಟೆ ಹೊತ್ತಿಗೆ ಶೇ.60.52ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.
ಮಧ್ಯಪ್ರದೇಶ ವಿಧಾನಸಭೆ ಚುನಾವಣೆಗೆ ಇಂದು ಮತದಾನ ನಡೆಯುತ್ತಿದ್ದು ಬೆಳಗ್ಗಿನಿಂದಲೇ ರಾಜ್ಯಾದ್ಯಂತ ಬಿರುಸಿನ ಮತದಾನ ನಡೆಯುತ್ತಿದೆ. ಅಲ್ಲಲ್ಲಿ ಕೆಲ ಅಹಿತಕರ ಘಟನೆಗಳು ವರದಿಯಾಗಿದ್ದು, ದಿಮಾನಿ ಅಸೆಂಬ್ಲಿ ಕ್ಷೇತ್ರದ ಮತಗಟ್ಟೆ 147-148 ರ ಹೊರಭಾಗದಲ್ಲಿ ಭಾರೀ ಭದ್ರತೆಯನ್ನು ನಿಯೋಜಿಸಲಾಗಿದ್ದು, ಮೊರೆನಾದ ಮಿರ್ಘಾನ್ನಲ್ಲಿ ಕಲ್ಲು ತೂರಾಟದ ಘಟನೆಯಲ್ಲಿ ಒಬ್ಬರು ಗಾಯಗೊಂಡಿದ್ದಾರೆ. ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಭಿಂಡ್ನ ಮೆಹಗಾಂವ್ ವಿಧಾನಸಭಾ ಕ್ಷೇತ್ರದ ಮನ್ಹಾದ್ ಗ್ರಾಮದಲ್ಲಿ ಮತದಾನ ಕೇಂದ್ರದ ಹೊರಗೆ ಕಲ್ಲು ತೂರಾಟ ನಡೆದಿದೆ. ಘಟನೆಯಲ್ಲಿ ಬಿಜೆಪಿ ಅಭ್ಯರ್ಥಿ ರಾಕೇಶ್ ಶುಕ್ಲಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.
ಇನ್ನು ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಮತ್ತು ಅವರ ಪತ್ನಿ ಅಮೃತಾ ರೈ ಅವರು ಭೋಪಾಲ್ನ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.
ಸಿಎಂ ರೇಸ್ ನಲ್ಲಿಲ್ಲ ಎಂದ ಜ್ಯೋತಿರಾಧಿತ್ಯ ಸಿಂಧ್ಯಾ
ಇತ್ತ ತಾವು ಸಿಎಂ ರೇಸ್ ನಲ್ಲಿಲ್ಲ ಎಂದು ಕೇಂದ್ರ ಸಚಿವ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಅವರು ಶುಕ್ರವಾರ ಹೇಳಿದ್ದಾರೆ. ಗ್ವಾಲಿಯರ್ನ ಮತಗಟ್ಟೆಯಲ್ಲಿ ಮತದಾನ ಮಾಡಿದ ಅವರು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಈ ಹಿಂದೆಯೇ ಹೇಳಿದ್ದೆ, ನಾನು ಮುಖ್ಯಮಂತ್ರಿ ರೇಸ್ನಲ್ಲಿ ಇಲ್ಲ, ನಾನು ಈ ಮೊದಲು ಅಥವಾ ಇವತ್ತು ಈ ರೇಸ್ನಲ್ಲಿ ಇರಲಿಲ್ಲ, ನೀವು ನನ್ನನ್ನು 2013, 2018 ಮತ್ತು ಈಗ ಪದೇ ಪದೇ ಕೇಳಿದ್ದೀರಿ ಮತ್ತು ನಾನು ನಿಮಗೆ ಅದನ್ನೇ ಹೇಳಿದ್ದೇನೆ ಎಂದರು.
ನಾಗರಿಕ ವಿಮಾನಯಾನ ಸಚಿವರು ಕೂಡ ಆಗಿರುವ ಸಿಂಧಿಯಾ ತಮ್ಮ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ಮತ್ತು ಅಭಿವೃದ್ಧಿ ಮತ್ತು ಪ್ರಗತಿಗಾಗಿ ಈ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಪೂರ್ಣ ಬಹುಮತದೊಂದಿಗೆ ಗೆಲ್ಲುವಂತೆ ಮಾಡುವುದೇ ನಮ್ಮ ಧ್ಯೇಯವಾಗಿದೆ ಎಂದು ಹೇಳಿದರು.
ಬಿಜೆಪಿ ಗೆದ್ದರೆ ಭಾರತ ಗೆದ್ದಂತೆ, ಬೇರೆ ಪಕ್ಷ ಗೆದ್ದರೆ ಪಾಕಿಸ್ತಾನದಲ್ಲಿ ಸಂಭ್ರಮಾಚರಣೆ: ನರೋತ್ತಮ್ ಮಿಶ್ರಾ
ಇನ್ನು ಮಧ್ಯಪ್ರದೇಶದ ಸಚಿವ ಮತ್ತು ಬಿಜೆಪಿ ನಾಯಕ ನರೋತ್ತಮ್ ಮಿಶ್ರಾ ಅವರು ದಾತಿಯಾದಲ್ಲಿ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಮತದಾರರನ್ನು ಓಲೈಸುವ ನಿಟ್ಟಿನಲ್ಲಿ ಅವರು "ನೀವು ಕಮಲದ ಚಿಹ್ನೆಯೊಂದಿಗೆ (ಇವಿಎಂನಲ್ಲಿ) ಬಟನ್ ಅನ್ನು ಒತ್ತಿದರೆ ನಂತರ ಭಾರತದಲ್ಲಿ ಸಂಭ್ರಮಾಚರಣೆಗಳು ನಡೆಯುತ್ತವೆ. ಬೇರೆ ಯಾವುದೇ ರಾಜಕೀಯ ಪಕ್ಷವು ಗೆದ್ದರೆ, ಪಾಕಿಸ್ತಾನದಲ್ಲಿ ಸಂಭ್ರಮಾಚರಣೆಗಳು ನಡೆಯುತ್ತವೆ. ಪಾಕಿಸ್ತಾನ, ರಾಷ್ಟ್ರೀಯ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮತದಾನ ಮಾಡಿ ಎಂದು ಹೇಳಿರುವ ಹೇಳಿಕೆ ಇದೀಗ ವ್ಯಾಪಕ ವಿರೋಧಕ್ಕೆ ಕಾರಣವಾಗಿದೆ.
ನರೋತ್ತಮ್ ಮಿಶ್ರಾ ಹೇಳಿಕೆಯನ್ನು ಖಂಡಿಸಿರುವ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್, ಅವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ. ಅಂತೆಯೇ ನರೋತ್ತಮ್ (ಮಿಶ್ರಾ) ಮಧ್ಯಪ್ರದೇಶದತ್ತ ಗಮನ ಹರಿಸಬೇಕು. ಅವರು ಯಾವಾಗಲೂ ಪಾಕಿಸ್ತಾನದ ಬಗ್ಗೆ ಏಕೆ ಮಾತನಾಡುತ್ತಾರೆ?” ಎಂದು ಮಾಜಿ ಸಂಸದ ಉಮಂಗ್ ಸಿಂಘರ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


