ಜ್ಞಾನವಾಪಿ ಮಸೀದಿ ಸಮೀಕ್ಷಾ ವರದಿ ಸಲ್ಲಿಸಲು ಎಎಸ್‌ಐಗೆ ಇನ್ನೂ 10 ದಿನ ಕಾಲಾವಕಾಶ ನೀಡಿದ ಕೋರ್ಟ್
ಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆಯನ್ನು ಪೂರ್ಣಗೊಳಿಸಿ ವರದಿ ಸಲ್ಲಿಸಲು ವಾರಣಾಸಿ ನ್ಯಾಯಾಲಯ ಶನಿವಾರ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ(ಎಎಸ್‌ಐ) ಇನ್ನೂ 10 ದಿನಗಳ ಕಾಲಾವಕಾಶ ನೀಡಿದೆ.

ವಾರಣಾಸಿ: ಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆಯನ್ನು ಪೂರ್ಣಗೊಳಿಸಿ ವರದಿ ಸಲ್ಲಿಸಲು ವಾರಣಾಸಿ ನ್ಯಾಯಾಲಯ ಶನಿವಾರ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ(ಎಎಸ್‌ಐ) ಇನ್ನೂ 10 ದಿನಗಳ ಕಾಲಾವಕಾಶ ನೀಡಿದೆ.
ವರದಿ ಸಲ್ಲಿಸಲು ಎಎಸ್‌ಐಗೆ ನವೆಂಬರ್ 17 ರವರೆಗೆ ಸಮಯ ನೀಡಲಾಗಿತ್ತು. ಆದರೆ ಶುಕ್ರವಾರ ಎಎಸ್ಐ ವಕೀಲರು ನ್ಯಾಯಾಲಯದಿಂದ 15 ದಿನಗಳ ಕಾಲಾವಕಾಶ ಕೋರಿದ್ದರು.
ಹಿಂದೂ ಪರ ಮದನ್ ಮೋಹನ್ ಯಾದವ್ ಪರ ವಕೀಲರ ಪ್ರಕಾರ, ತಾಂತ್ರಿಕ ವರದಿ ಲಭ್ಯವಿಲ್ಲದ ಕಾರಣ ಎಎಸ್‌ಐ ಹೆಚ್ಚಿನ ಕಾಲಾವಕಾಶ ಕೋರಿದೆ.
ಇಂದು ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಧೀಶ ಎ ಕೆ ವಿಶ್ವೇಶ್ ಅವರು, ನವೆಂಬರ್ 28 ರೊಳಗೆ ವರದಿ ಸಲ್ಲಿಸುವಂತೆ ಎಎಸ್‌ಐಗೆ ಸೂಚಿಸಿದ್ದಾರೆ.
ASI ಇಲ್ಲಿಯ ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿ ಆವರಣದ ವೈಜ್ಞಾನಿಕ ಸಮೀಕ್ಷೆ ನಡೆಸುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


