ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದ ಬಿಜೆಪಿ ನಾಯಕನಿಗೆ ಒಲಿಯಿತು ಪ್ರಮುಖ ಹುದ್ದೆ!
ಮೋದಿ ಉಪನಾಮಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ದೂರು ನೀಡಿದ್ದ ಬಿಜೆಪಿ ನಾಯಕ ಪೂರ್ಣೇಶ್ ಮೋದಿಗೆ ಪ್ರಮುಖ ಸ್ಥಾನ ನೀಡಿದೆ.

ನವದೆಹಲಿ: ಮೋದಿ ಉಪನಾಮಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ದೂರು ನೀಡಿದ್ದ ಬಿಜೆಪಿ ನಾಯಕ ಪೂರ್ಣೇಶ್ ಮೋದಿಗೆ ಪ್ರಮುಖ ಸ್ಥಾನ ನೀಡಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ಪೂರ್ಣೇಶ್ ಮೋದಿಯನ್ನು ದಾದ್ರಾ ನಗರ ಹವೇಲಿ ಮತ್ತು ದಮನ್ ದಿಯು ಉಸ್ತುವಾರಿ ಹಾಗೂ ದುಶ್ಯಂತ್ ಪಟೇಲ್ ಅವರನ್ನು ಸಹ-ಪ್ರಭಾರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
2019ರಲ್ಲಿ ಕೋಲಾರದಲ್ಲಿ ನಡೆದ ಲೋಕಸಭೆ ಚುನಾವಣಾ ಪ್ರಚಾರದ ವೇಳೆ ಮೋದಿ ಉಪನಾಮದ ಬಗ್ಗೆ ಪ್ರಸ್ತಾಪಿಸಿದ್ದ ರಾಹುಲ್ ಗಾಂಧಿ ವಿರುದ್ಧ ಸೂರತ್ ಪಶ್ಚಿಮದ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಅವರು ಸೂರತ್ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್ ನ್ಯಾಯಾಲಯವು ಮಾರ್ಚ್‌ನಲ್ಲಿ ರಾಹುಲ್ ಗಾಂಧಿ ಅವರು ದೋಷಿ ಎಂದು ಹೇಳಿ ಮೂರು ವರ್ಷಗಳ ಕಾಲ ಜೈಲು ಶಿಕ್ಷೆಯನ್ನು ವಿಧಿಸಿತ್ತು.
ನಂತರ ವಯನಾಡ್ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಲಾಯಿತು. ಈ ವಿಚಾರವಾಗಿ ರಾಹುಲ್ ಗಾಂಧಿ ಅವರು ಸುಪ್ರೀಂ ಕೋರ್ಟ್ಗೆ ಆಗಸ್ಟ್ನಲ್ಲಿ ಮನವಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ, ಅವರ ಶಿಕ್ಷೆಯನ್ನು ತಡೆಹಿಡಿಯಿತು. ನಂತರ ಮತ್ತೆ ಲೋಕಸಭಾ ಸದಸ್ಯತ್ವವನ್ನು ಅವರಿಗೆ ನೀಡಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


