ದೇಶ

ಜಾರ್ಖಂಡ್: ರಸ್ತೆ ಬದಿಯ ಮರಕ್ಕೆ ಎಸ್‌ಯುವಿ ಡಿಕ್ಕಿ; ಸ್ಥಳದಲ್ಲೇ ಐವರು ಸಾವು, ಹಲವರಿಗೆ ಗಂಭೀರ ಗಾಯ

ವೇಗವಾಗಿ ಬಂದ ಎಸ್‌ಯುವಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಐವರು ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಸೇರಿದಂತೆ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಾರ್ಖಂಡ್‌ನ ಗಿರಿದಿಹ್ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.

ಜಾರ್ಖಂಡ್: ರಸ್ತೆ ಬದಿಯ ಮರಕ್ಕೆ ಎಸ್‌ಯುವಿ ಡಿಕ್ಕಿ; ಸ್ಥಳದಲ್ಲೇ ಐವರು ಸಾವು, ಹಲವರಿಗೆ ಗಂಭೀರ ಗಾಯ
ಸಾಂದರ್ಭಿಕ ಚಿತ್ರ
Published On :

ಗಿರಿದಿಹ್: ವೇಗವಾಗಿ ಬಂದ ಎಸ್‌ಯುವಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಐವರು ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಸೇರಿದಂತೆ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಾರ್ಖಂಡ್‌ನ ಗಿರಿದಿಹ್ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.

ಮುಫಸ್ಸಿಲ್ ಪೊಲೀಸ್ ಠಾಣಾ ವ್ಯಾಪ್ತಿಯ ಬಾಗ್ಮಾರಾದಲ್ಲಿ ಶನಿವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಅಪಘಾತ ನಡೆದಿದೆ. ವಾಹನದಲ್ಲಿ 10 ಮಂದಿಯಿದ್ದರು. ಮದುವೆ ಸಮಾರಂಭ ಮುಗಿಸಿ ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ.

ಗಿರಿದಿಹ್ ಸದರ್ ಉಪವಿಭಾಗೀಯ ಪೊಲೀಸ್ ಅಧಿಕಾರಿ (SDPO) ಅನಿಲ್ ಸಿಂಗ್ ಮಾತನಾಡಿ, ಕಾರಿನಲ್ಲಿದ್ದವರು ಬಿರ್ನಿ ಪೊಲೀಸ್ ಠಾಣೆ ವ್ಯಾಪ್ತಿಯ ಥೋರಿಯಾ ಗ್ರಾಮದಿಂದ ಸುಮಾರು 40 ಕಿಮೀ ದೂರದಲ್ಲಿರುವ ಟಿಕೋಡಿಹ್‌ನಲ್ಲಿ ನಡೆದ ಸಮಾರಂಭದಲ್ಲಿ ಭಾಗವಹಿಸಲು ಬಂದಿದ್ದರು ಮತ್ತು ಅಪಘಾತ ಸಂಭವಿಸಿದಾಗ ಮನೆಗೆ ಹಿಂದಿರುಗುತ್ತಿದ್ದರು.

ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಉಳಿದ ಐವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕ ನಿದ್ದೆ ಮಂಪರಿನಲ್ಲಿದ್ದ ಕಾರಣ ಅಪಘಾತ ಸಂಭವಿಸಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.