ಮಧ್ಯ ಪ್ರದೇಶ ಚುನಾವಣೆ: 340 ಕೋಟಿ ರೂ. ಮೌಲ್ಯದ ನಗದು, ಡ್ರಗ್ಸ್, ಚಿನ್ನಾಭರಣ ವಶ
ಮಧ್ಯಪ್ರದೇಶದಲ್ಲಿ ಅಕ್ಟೋಬರ್ 9 ರಂದು ರಾಜ್ಯ ವಿಧಾನಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ ಇಲ್ಲಿಯವರೆಗೂ ರೂ. 40.18 ಕೋಟಿ ನಗದು, 17 ಕೋಟಿಗೂ ಹೆಚ್ಚು ಮೌಲ್ಯದ ಮಾದಕ ದ್ರವ್ಯಗಳು, ಮದ್ಯ, ಚಿನ್ನಾಭರಣ ಸೇರಿದಂತೆ ಒಟ್ಟು 280 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭೋಪಾಲ್: ಮಧ್ಯಪ್ರದೇಶದಲ್ಲಿ ಅಕ್ಟೋಬರ್ 9 ರಂದು ರಾಜ್ಯ ವಿಧಾನಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ ಇಲ್ಲಿಯವರೆಗೂ ರೂ. 40.18 ಕೋಟಿ ನಗದು, 17 ಕೋಟಿಗೂ ಹೆಚ್ಚು ಮೌಲ್ಯದ ಮಾದಕ ದ್ರವ್ಯಗಳು, ಮದ್ಯ, ಚಿನ್ನಾಭರಣ ಸೇರಿದಂತೆ ಒಟ್ಟು 280 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾಜ್ಯದ 230 ವಿಧಾನಸಭಾ ಸ್ಥಾನಗಳಿಗೆ ಶುಕ್ರವಾರ ಚುನಾವಣೆ ನಡೆದಿದ್ದು, ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನುಪಮ್ ರಾಜನ್, ನೀತಿ ಸಂಹಿತೆ ಜಾರಿಯಾದಾಗಿನಿಂದ ರಾಜ್ಯಾದ್ಯಂತ ಜಾರಿ ಸಂಸ್ಥೆಗಳು ನಿರಂತರ ಕ್ರಮ ಕೈಗೊಂಡಿವೆ. ವಿವಿಧ ತನಿಖಾ ತಂಡಗಳು ಹಾಗೂ ಪೊಲೀಸರು ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಸುಮಾರು 339.95 ಕೋಟಿ ರೂ. ಮೌಲ್ಯದ ಅಕ್ರಮ ಮದ್ಯ, ಮಾದಕ ದ್ರವ್ಯಗಳು, ನಗದು, ಅಮೂಲ್ಯವಾದ ಲೋಹಗಳು, ಚಿನ್ನ, ಬೆಳ್ಳಿ, ಆಭರಣಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಂಡಿದೆ ಎಂದು ಅವರು ಹೇಳಿದರು.
ಅಕ್ಟೋಬರ್ 9 ರಿಂದ ನವೆಂಬರ್ 16 ರವರೆಗೆ ಈ ಜಂಟಿ ತಂಡಗಳು 40.18 ಕೋಟಿ ರೂಪಾಯಿ ನಗದು, 65.56 ಕೋಟಿ ರೂಪಾಯಿ ಮೌಲ್ಯದ 34.68 ಲಕ್ಷ ಲೀಟರ್ ಅಕ್ರಮ ಮದ್ಯ, 17.25 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳು, 92.76 ಕೋಟಿ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಮತ್ತು 124. 18 ಕೋಟಿ ಮೊತ್ತದ ವಸ್ತುಗಳನ್ನು ವಶಕ್ಕೆ ಪಡೆದಿದೆ ಎಂದು ರಾಜನ್ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


