ಇಂದೋರ್‌ಗೆ ತೆರಳುತ್ತಿದ್ದ ವಿಮಾನದಲ್ಲಿ ಎನ್‌ಆರ್‌ಐ ಮಹಿಳೆಗೆ ಕಿರುಕುಳ: ದೂರು ದಾಖಲು
ರಾಜಸ್ಥಾನದ ಉದಯಪುರದಿಂದ ಇಂದೋರ್‌ಗೆ ತೆರಳುತ್ತಿದ್ದ ವಿಮಾನದಲ್ಲಿ ಅನಿವಾಸಿ ಭಾರತೀಯ ಮಹಿಳೆಯೊಬ್ಬರು, ಪ್ರಯಾಣದ ವೇಳೆ ತಮಕೆ ಕಿರುಕುಳ ನೀಡಲಾಗಿದೆ ಎಂದು ಆರೋಪಿ ಇಂದೋರ್ ಜಿಲ್ಲೆಯ ಪೊಲೀಸ್ ಠಾಣೆಯಲ್ಲಿ ದೂರು...

ಇಂದೋರ್: ರಾಜಸ್ಥಾನದ ಉದಯಪುರದಿಂದ ಇಂದೋರ್‌ಗೆ ತೆರಳುತ್ತಿದ್ದ ವಿಮಾನದಲ್ಲಿ ಅನಿವಾಸಿ ಭಾರತೀಯ ಮಹಿಳೆಯೊಬ್ಬರು, ಪ್ರಯಾಣದ ವೇಳೆ ತಮಕೆ ಕಿರುಕುಳ ನೀಡಲಾಗಿದೆ ಎಂದು ಆರೋಪಿ ಇಂದೋರ್ ಜಿಲ್ಲೆಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ವಿಮಾನದಲ್ಲಿ ಸಹ ಪ್ರಯಾಣಿಕರಿಂದ ಕಿರುಕುಳಕ್ಕೊಳಗಾದ ಮಹಿಳೆ, ಇಂದೋರ್ ತಲುಪಿದ ನಂತರ ನಗರದ ಏರೋಡ್ರೋಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಹೆಚ್ಚುವರಿ ಉಪ ಪೊಲೀಸ್ ಕಮಿಷನರ್ ರಾಜೇಶ್ ದಂಡೋಟಿಯಾ ಮಾತನಾಡಿ, "ಅಮೆರಿಕದಿಂದ ಉದಯಪುರ ಮೂಲಕ ಇಂದೋರ್ ತಲುಪಿದ ಎನ್‌ಆರ್‌ಐ ಮಹಿಳೆಯೊಬ್ಬರು ದೂರು ನೀಡಿದ್ದು, ಗುರುವಾರ ವಿಮಾನದಲ್ಲಿ ವ್ಯಕ್ತಿಯೊಬ್ಬರು ತಮಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿರುವುದಾಗಿ ತಿಳಿಸಿದ್ದಾರೆ.
ಮಹಿಳೆ ಅಮೆರಿಕದಲ್ಲಿ ವಾಸವಾಗಿದ್ದು, ಅಲ್ಲಿ ಟ್ರೈನಿ ಪೈಲಟ್ ಆಗಿದ್ದಾರೆ. ಮಹಿಳೆಯ ದೂರಿನ ಮೇರೆಗೆ ಪೊಲೀಸರು ಅಪರಿಚಿತ ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 354 ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಆರೋಪಿಯ ಬಗ್ಗೆ ಏರ್‌ಲೈನ್‌ನಿಂದ ಮಾಹಿತಿ ಕೇಳಲಾಗಿದ್ದು, ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


