ಆರ್‌ಬಿಐ ಮಾಜಿ ಗವರ್ನರ್ ಎಸ್ ವೆಂಕಟರಾಮನ್ ನಿಧನ
ಅನಾರೋಗ್ಯದಿಂದ ಬಳಲುತ್ತಿದ್ದ ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಎಸ್ ವೆಂಕಟರಾಮನ್ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.

ಚೆನೈ: ಅನಾರೋಗ್ಯದಿಂದ ಬಳಲುತ್ತಿದ್ದ ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಎಸ್ ವೆಂಕಟರಾಮನ್ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.
ವೆಂಕಟರಾಮನ್ ಭಾರತೀಯ ಆಡಳಿತ ಸೇವೆಯ ಸದಸ್ಯರಾಗಿದ್ದರು ಮತ್ತು ಆರ್‌ಬಿಐ ಗವರ್ನರ್ ಪಾತ್ರ ವಹಿಸಿಕೊಳ್ಳುವ ಮೊದಲು ಅವರು ಹಣಕಾಸು ಕಾರ್ಯದರ್ಶಿಯಾಗಿ ಮತ್ತು ನಂತರ ಕರ್ನಾಟಕ ಸರ್ಕಾರದ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದರು.
ವೆಂಕಟರಾಮನ್ ಡಿಸೆಂಬರ್ 1990 ಮತ್ತು ಡಿಸೆಂಬರ್ 1992 ರ ನಡುವೆ ಆರ್‌ಬಿಐಗೆ ಸೇವೆ ಸಲ್ಲಿಸಿದ್ದರು. ಇದರ ಬಿಕ್ಕಟ್ಟಿನ ಸಂದರ್ಭದಲ್ಲಿ ಅವರ ಕೊಡುಗೆಗಳನ್ನು ಸ್ಮರಿಸಿರುವ ಆರ್ ಬಿಐ ಗವರ್ನರ್ ಶಕ್ತಿಕಾಂತ ದಾಸ್, ವೆಂಕಟರಾಮನ್ ಅದ್ಬುತ ವ್ಯಕ್ತಿತ್ವವುಳ್ಳ, ಜನರ ಸೇವಕ ಎಂದು ಬಣ್ಣಿಸಿದ್ದಾರೆ.
ಅವರ ಅವಧಿಯಲ್ಲಿ ಭಾರತ ಐಎಂಎಫ್‌ನ ಸ್ಥಿರೀಕರಣ ಕಾರ್ಯಕ್ರಮವನ್ನು ಅಳವಡಿಸಿಕೊಂಡು, ರೂಪಾಯಿ ಅಪಮೌಲ್ಯೀಕರಣ ಮತ್ತು ಆರ್ಥಿಕ ಸುಧಾರಣೆ ಕಾರ್ಯಕ್ರಮ ಪ್ರಾರಂಭಿಸಿತು ಎಂದು ಆರ್‌ಬಿಐ ತನ್ನ ವೆಬ್‌ಸೈಟ್‌ನಲ್ಲಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


