ದೇಶ

ನವದೆಹಲಿ: ಜಾಮಾ ಮಸೀದಿ ಬಳಿ ಇಬ್ಬರಿಂದ ಗುಂಡಿನ ದಾಳಿ, 23 ವರ್ಷದ ಯುವಕ ಗಾಯ

ಮಧ್ಯ ದೆಹಲಿಯ ಜಾಮಾ ಮಸೀದಿ ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ್ದರಿಂದ 23 ವರ್ಷದ ಯುವಕನೋರ್ವ ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಸೋಮವಾರ ಮುಂಜಾನೆ 2.30 ರ ಸುಮಾರಿನಲ್ಲಿ ಈ ಘಟನೆ ನಡೆದಿದೆ.

ನವದೆಹಲಿ: ಜಾಮಾ ಮಸೀದಿ ಬಳಿ ಇಬ್ಬರಿಂದ ಗುಂಡಿನ ದಾಳಿ, 23 ವರ್ಷದ ಯುವಕ ಗಾಯ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಮಧ್ಯ ದೆಹಲಿಯ ಜಾಮಾ ಮಸೀದಿ ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ್ದರಿಂದ 23 ವರ್ಷದ ಯುವಕನೋರ್ವ ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಸೋಮವಾರ ಮುಂಜಾನೆ 2.30 ರ ಸುಮಾರಿನಲ್ಲಿ ಈ ಘಟನೆ ನಡೆದಿದೆ.

ಅಸಾದ್ ಮತ್ತು ಆತನ ಸ್ನೇಹಿತನನ್ನು ಇಬ್ಬರು ವ್ಯಕ್ತಿಗಳು ತಡೆದು ನಿಂದಿಸಿದ್ದಾರೆ. ಇದಕ್ಕೆ ಯುವಕ ಆಕ್ಷೇಪ ವ್ಯಕ್ತಪಡಿಸಿದಾಗ ಜಗಳ ಉಂಟಾಗಿದೆ. ನಂತರ ಆರೋಪಿಗಳು ಇದ್ದಕ್ಕಿದ್ದಂತೆ ಪಿಸ್ತೂಲ್ ನಿಂದ ಗುಂಡು ಹಾರಿಸಿದ್ದು, ಯುವಕನ ತಲೆಗೆ ಗಾಯವಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗಾಯಾಳುವನ್ನು ಎಲ್ ಎನ್ ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಐಪಿಸಿ ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಮುಂದುವರೆಸಿದ್ದಾರೆ.

ಗಾಯಾಳು ಮತ್ತು ಆರೋಪಿಗಳು ಪರಸ್ಪರ ಪರಿಚಿತರಾಗಿದ್ದು, ಅವರ ನಡುವೆ ವಿವಾದವೇರ್ಪಟ್ಟಿತ್ತು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.