ದೇಶ

ಕಾಶ್ಮೀರ: ರಜೌರಿಯಲ್ಲಿ ಉಗ್ರರೊಂದಿಗೆ ಗುಂಡಿನ ಕಾಳಗ; ಇಬ್ಬರು ಸೇನಾ ಸಿಬ್ಬಂದಿ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾಶ್ಮೀರ: ರಜೌರಿಯಲ್ಲಿ ಉಗ್ರರೊಂದಿಗೆ ಗುಂಡಿನ ಕಾಳಗ; ಇಬ್ಬರು ಸೇನಾ ಸಿಬ್ಬಂದಿ ಹುತಾತ್ಮ
ಸಾಂದರ್ಭಿಕ ಚಿತ್ರ
Published On :

ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಜೌರಿಯ ಕಲಕೋಟೆ ತಹಸಿಲ್‌ನ ಬಾಜಿ ಮಾಲ್ ಪ್ರದೇಶದಲ್ಲಿ ಭದ್ರತಾಪಡೆಗಳು ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ಇಬ್ಬರು ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಮೇರೆಗೆ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಶೋಧ ಕಾರ್ಯಾಚರಣೆ ನಡೆಸಿದ್ದು,ಈ ವೇಳೆ ಉಗ್ರರೊಂದಿಗೆ ಗುಂಡಿನ ಚಕಮಕಿ ನಡೆಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಗುಂಡಿನ ಚಕಮಕಿಯಲ್ಲಿ ಒಬ್ಬ ಅಧಿಕಾರಿ ಹಾಗೂ ಒಬ್ಬ ಯೋಧ ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಇನ್ನೊಬ್ಬರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.