ಡೀಪ್ಫೇಕ್ಗೆ ಕಡಿವಾಣ ಹಾಕಲು ಶೀಘ್ರದಲ್ಲೇ ಹೊಸ ಕಾನೂನು; ಐಟಿ ಸಚಿವ ಅಶ್ವಿನಿ ವೈಷ್ಣವ್
ಡೀಪ್ಫೇಕ್ಗಳು ಪ್ರಜಾಪ್ರಭುತ್ವಕ್ಕೆ ಹೊಸ ಅಪಾಯ ಎಂದ ಕೇಂದ್ರ ಐಟಿ ಸಚಿವ ಅಶ್ವಿನಿ ವೈಷ್ಣವ್ ಅವರು, ಡೀಪ್ಫೇಕ್ಗಳಿಗೆ ಕಡಿವಾಣ ಹಾಕಲು ಸರ್ಕಾರ ಶೀಘ್ರದಲ್ಲೇ ಹೊಸ ನಿಯಮಾವಳಿಗಳನ್ನು ರೂಪಿಸಲಿದೆ ಎಂದು ಗುರುವಾರ...

ನವದೆಹಲಿ: ಡೀಪ್ಫೇಕ್ಗಳು ಪ್ರಜಾಪ್ರಭುತ್ವಕ್ಕೆ ಹೊಸ ಅಪಾಯ ಎಂದ ಕೇಂದ್ರ ಐಟಿ ಸಚಿವ ಅಶ್ವಿನಿ ವೈಷ್ಣವ್ ಅವರು, ಡೀಪ್ಫೇಕ್ಗಳಿಗೆ ಕಡಿವಾಣ ಹಾಕಲು ಸರ್ಕಾರ ಶೀಘ್ರದಲ್ಲೇ ಹೊಸ ನಿಯಮಾವಳಿಗಳನ್ನು ರೂಪಿಸಲಿದೆ ಎಂದು ಗುರುವಾರ ಹೇಳಿದ್ದಾರೆ.
ಇಂದು ಡೀಪ್ಫೇಕ್ ಕುರಿತು ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳನ್ನು ಭೇಟಿ ಮಾಡಿ, ಚರ್ಚಿಸಿದ ಸಚಿವರು, ಪತ್ತೆ, ತಡೆಗಟ್ಟುವಿಕೆ, ವರದಿ ಮಾಡುವ ಕಾರ್ಯವಿಧಾನವನ್ನು ಬಲಪಡಿಸುವುದು ಮತ್ತು ಬಳಕೆದಾರರಿಗೆ ಜಾಗೃತಿ ಮೂಡಿಸುವಂತಹ ಕೆಲಸದ ಅಗತ್ಯವನ್ನು ಕಂಪನಿಗಳು ಒಪ್ಪಿಕೊಂಡಿವೆ ಎಂದರು.
"ನಾವು ಇಂದೇ ಕರಡು ನಿಯಮಾವಳಿಯನ್ನು ಸಿದ್ಧಪಡಿಸಲು ಪ್ರಾರಂಭಿಸುತ್ತೇವೆ ಮತ್ತು ಕಡಿಮೆ ಸಮಯದಲ್ಲಿ ಡೀಪ್ಫೇಕ್ಗಳಿಗಾಗಿ ಹೊಸ ನಿಯಮಾವಳಿಗಳನ್ನು ರೂಪಿಸುತ್ತೇವೆ; ಇದು ಅಸ್ತಿತ್ವದಲ್ಲಿರುವ ಚೌಕಟ್ಟನ್ನು ತಿದ್ದುಪಡಿ ಮಾಡುವ ಅಥವಾ ಹೊಸ ನಿಯಮಗಳು ಅಥವಾ ಹೊಸ ಕಾನೂನನ್ನು ತರುವ ರೂಪದಲ್ಲಿರಬಹುದು" ಎಂದು ವೈಷ್ಣವ್ ಹೇಳಿದ್ದಾರೆ.
ಡೀಪ್ಫೇಕ್ಗಳು ಪ್ರಜಾಪ್ರಭುತ್ವಕ್ಕೆ ಹೊಸ ಬೆದರಿಕೆಯಾಗಿ ಹೊರಹೊಮ್ಮಿದೆ. ಇದನ್ನು ಎದುರಿಸಲು ನಾವು ನಮ್ಮ ಮುಂದಿನ ಸಭೆಯನ್ನು ಡಿಸೆಂಬರ್ ಮೊದಲ ವಾರದಲ್ಲಿ ನಡೆಸುತ್ತೇವೆ. ಅದು ಇಂದಿನ ನಿರ್ಧಾರಗಳ ಮೇಲೆ ಮುಂದಿನ ಕ್ರಮ ಮತ್ತು ಕರಡು ನಿಯಮಾವಳಿಯಲ್ಲಿ ಏನನ್ನು ಸೇರಿಸಬೇಕು ಎಂಬುದರ ಬಗ್ಗೆಯೂ ಚರ್ಚಿಸುತ್ತೇವೆ" ಎಂದು ವೈಷ್ಣವ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


