ದೇಶ

ಕೊಲ್ಲಾಪುರ ಬಳಿ ಬಸ್ ಪಲ್ಟಿ; ಒಂದೇ ಕುಟುಂಬದ ಮೂವರು ಸಾವು, 9 ಮಂದಿಗೆ ಗಾಯ

ಮಹಾರಾಷ್ಟ್ರದ ಕೊಲ್ಹಾಪುರ ಬಳಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ ಮತ್ತು ಒಂಬತ್ತು ಮಂದಿ ಗಾಯಗೊಂಡಿರುವ ಘಟನೆ ಗುರುವಾರ ಬೆಳಗಿನ ಜಾವ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಲ್ಲಾಪುರ ಬಳಿ ಬಸ್ ಪಲ್ಟಿ; ಒಂದೇ ಕುಟುಂಬದ ಮೂವರು ಸಾವು, 9 ಮಂದಿಗೆ ಗಾಯ
ಸಾಂದರ್ಭಿಕ ಚಿತ್ರ
Published On :

ಪುಣೆ: ಮಹಾರಾಷ್ಟ್ರದ ಕೊಲ್ಹಾಪುರ ಬಳಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ ಮತ್ತು ಒಂಬತ್ತು ಮಂದಿ ಗಾಯಗೊಂಡಿರುವ ಘಟನೆ ಗುರುವಾರ ಬೆಳಗಿನ ಜಾವ  ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪುಣೆಯಿಂದ ಸುಮಾರು 240 ಕಿಮೀ ದೂರದಲ್ಲಿರುವ ಕೊಲ್ಹಾಪುರ ನಗರದ ಹೊರವಲಯದಲ್ಲಿರುವ ಪುಯಿಖಾಡಿ ಗ್ರಾಮದ ಬಳಿ ಇಂದು ಬೆಳಗಿನ ಜಾವ 2 ಗಂಟೆಗೆ ಈ ಅಪಘಾತ ಸಂಭವಿಸಿದೆ.

ಸುಮಾರು 25 ಪ್ರಯಾಣಿಕರನ್ನು ಹೊತ್ತ ಸ್ಲೀಪರ್ ಕೋಚ್ ಬಸ್ ಗೋವಾದಿಂದ ಮುಂಬೈಗೆ ತೆರಳುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

"ನಮಗೆ ಬಂದ ಮಾಹಿತಿಯ ಪ್ರಕಾರ, ಕೊಲ್ಹಾಪುರ-ರಾಧನಗರಿ ರಸ್ತೆಯ ಪುಯಿಖಾಡಿ ಬಳಿ ತಿರುವಿನಲ್ಲಿ  ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ" ಎಂದು ಕಾರ್ವಿರ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮಾಹಿತಿ ಪಡೆದ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಕ್ರೇನ್‌ಗಳೊಂದಿಗೆ ಸ್ಥಳಕ್ಕೆ ಧಾವಿಸಿ, ಹಲವರನ್ನು ರಕ್ಷಿಸಿದ್ದಾರೆ.

"ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ ಮತ್ತು ಒಂಬತ್ತು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳು ಪ್ರಸ್ತುತ ಕೊಲ್ಲಾಪುರದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ" ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.