ದೇಶ

ರಜೌರಿ ಎನ್ಕೌಂಟರ್: ಐವರು ಹುತಾತ್ಮ ವೀರ ಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಇತ್ತೀಚೆಗೆ ಉಗ್ರರೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಹುತಾತ್ಮರಾದ ಐವರು ವೀರ ಯೋಧರಿಗೆ ಭಾರತೀಯ ಸೇನಾಪಡೆ ಹಾಗೂ ಪೊಲೀಸರು ಶುಕ್ರವಾರ ಶ್ರದ್ಧಾಂಜಲಿ ಸಲ್ಲಿಸಿದರು.

ರಜೌರಿ ಎನ್ಕೌಂಟರ್: ಐವರು ಹುತಾತ್ಮ ವೀರ ಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ
ಹುತಾತ್ಮರಾದ ವೀರ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ.
Published On :

ರಜೌರಿ/ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಇತ್ತೀಚೆಗೆ ಉಗ್ರರೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಹುತಾತ್ಮರಾದ ಐವರು ವೀರ ಯೋಧರಿಗೆ ಭಾರತೀಯ ಸೇನಾಪಡೆ ಹಾಗೂ ಪೊಲೀಸರು ಶುಕ್ರವಾರ ಶ್ರದ್ಧಾಂಜಲಿ ಸಲ್ಲಿಸಿದರು.

ಬುಧವಾರ ಮತ್ತು ಗುರುವಾರ ದಾರಂಸಾಲ್‌ನ ಬಾಜಿಮಲ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ 36 ಗಂಟೆಗಳ ಕಾಲ ನಡೆದ ಎನ್‌ಕೌಂಟರ್‌ನಲ್ಲಿ ಅಫ್ಘಾನಿಸ್ತಾನದಲ್ಲಿ ತರಬೇತಿ ಪಡೆದ ಲಷ್ಕರ್-ಎ-ತೈಬಾ (ಎಲ್‌ಇಟಿ) ಕಮಾಂಡರ್ ಸೇರಿದಂತೆ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಕಾರ್ಯಾಚರಣೆ ವೇಳೆ ಇಬ್ಬರು ಕ್ಯಾಪ್ಟನ್‌ಗಳು ಸೇರಿದಂತೆ ಐವರು ಭಾರತೀಯ ಸೈನಿಕರು ಹುತಾತ್ಮರಾಗಿದ್ದರು. 

ಎನ್‌ಕೌಂಟರ್‌ನಲ್ಲಿ ಹುತಾತ್ಮರಾದ ಸೇನಾ ಸಿಬ್ಬಂದಿಗೆ ಆರ್ಮಿ ಜನರಲ್ ಹಾಸ್ಪಿಟಲ್ ಮತ್ತು ಸೇನೆಯು ಪುಷ್ಪಾರ್ಪಣೆ ಕಾರ್ಯಕ್ರಮ ಆಯೋಜಿಸಿತ್ತು.

ಇದರಲ್ಲಿ 'ಜನರಲ್ ಆಫೀಸರ್ ಕಮಾಂಡಿಂಗ್ ರೋಮಿಯೋ ಫೋರ್ಸ್' ಮತ್ತು ಇತರೆ ಪೊಲೀಸ್ ಅಧಿಕಾರಿಗಳು ಪುಷ್ಪಗುಚ್ಛಗಳನ್ನಿಡುವ ಮೂಲಕ ಗೌರವ ವಂದನೆ ಸಲ್ಲಿಸಿದರು. ಪೂಂಚ್ ನಿವಾಸಿ ಹಾವ್ ಅಬ್ದುಲ್ ಮಜೀದ್ ಅವರ ಪುಷ್ಪಾರ್ಚನೆ ಕಾರ್ಯಕ್ರಮ ಪೂಂಚ್‌ನಲ್ಲಿ ನೆರವೇರಿತು.

ಉಗ್ರರ ವಿರುದ್ಧ ಹೋರಾಡುವಾಗ ಪ್ರಾಣತ್ಯಾಗ ಮಾಡಿದ ಕರ್ನಾಟಕದ ಮಂಗಳೂರಿನ ನಿವಾಸಿ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್, ಉತ್ತರ ಪ್ರದೇಶದ ಆಗ್ರಾ ನಿವಾಸಿ ಕ್ಯಾಪ್ಟನ್ ಶುಭಂ ಗುಪ್ತಾ, ಜಮ್ಮು ಮತ್ತು ಕಾಶ್ಮೀರದ ಪೂಂಚ್ ನಿವಾಸಿ ಹವಾಲ್ದಾರ್ ಅಬ್ದುಲ್ ಮಜೀದ್, ಉತ್ತರಾಖಂಡ್‌ನ ನೈನಿತಾಲ್​ನಿಂದ ಲ್ಯಾನ್ಸ್ ನಾಯಕ್ ಸಂಜಯ್ ಬಿಷ್ಟ್ ಮತ್ತು ಉತ್ತರ ಪ್ರದೇಶದ ಅಲಿಗಢದಿಂದ ಪ್ಯಾರಾಟ್ರೂಪರ್ ಸಚಿನ್ ಲಾರ್​ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.