ದೇಶ

ಆಯುಷ್ಮಾನ್ ಭಾರತ್ ಆರೋಗ್ಯ, ಸ್ವಾಸ್ಥ್ಯ ಕೇಂದ್ರಗಳ ಹೆಸರು ಮರುನಾಮಕರಣ

ಆಯುಷ್ಮಾನ್ ಭಾರತ್-ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳ ಹೆಸರನ್ನು 'ಆಯುಷ್ಮಾನ್ ಆರೋಗ್ಯ ಮಂದಿರ' ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಆಯುಷ್ಮಾನ್ ಭಾರತ್ ಆರೋಗ್ಯ, ಸ್ವಾಸ್ಥ್ಯ ಕೇಂದ್ರಗಳ ಹೆಸರು ಮರುನಾಮಕರಣ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಆಯುಷ್ಮಾನ್ ಭಾರತ್-ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳ ಹೆಸರನ್ನು 'ಆಯುಷ್ಮಾನ್ ಆರೋಗ್ಯ ಮಂದಿರ' ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಮರುನಾಮಕರಣ ಪ್ರಕ್ರಿಯೆಯನ್ನು ಜಾರಿಗೆ ತರಲು ಕೇಂದ್ರ ಆರೋಗ್ಯ ಸಚಿವಾಲಯ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರವೊಂದನ್ನು ಕಳುಹಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಆಯುಷ್ಮಾನ್ ಭಾರತ್-ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳ ಪೋರ್ಟಲ್‌ನಲ್ಲಿ ಮರುನಾಮಕರಣ ಮಾಡಲಾದ ಪ್ರಾಥಮಿಕ ಆರೋಗ್ಯ ಸೌಲಭ್ಯಗಳ ಛಾಯಾಚಿತ್ರಗಳನ್ನು ಅಪ್‌ಲೋಡ್ ಮಾಡಲು ರಾಜ್ಯಗಳಿಗೆ ಸೂಚಿಸಲಾಗಿದೆ ಎಂದು ಮೂಲಗಳು ಹೇಳಿವೆ. 

ಮರುನಾಮಕರಣ ಮಾಡಲಾದ ಭಾರತ್ ಆರೋಗ್ಯ, ಸ್ವಾಸ್ಥ್ಯ ಕೇಂದ್ರಗಳು 'ಆರೋಗ್ಯಂ ಪರ್ಮಂ ಧನಮ್'. - ಎಂಬ ಟ್ಯಾಗ್ ಲೈನ್ ಕೂಡಾ ಹೊಂದಿವೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.