ದೇಶ

Covid-19: ದೇಶದಲ್ಲಿಂದು ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ!

ದೇಶದಲ್ಲಿಂದು 31 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದ್ದು, 249 ಸಕ್ರಿಯ ಪ್ರಕರಣಗಳು ಇವೆ.

Covid-19: ದೇಶದಲ್ಲಿಂದು ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ!
ಪ್ರಾತಿನಿಧಿಕ ಚಿತ್ರ
Published On :

ನವದೆಹಲಿ: ದೇಶದಲ್ಲಿಂದು 31 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದ್ದು, 249 ಸಕ್ರಿಯ ಪ್ರಕರಣಗಳು ಇವೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಈವರೆಗೆ ದೇಶದಲ್ಲಿ 5,33,298 ಮಂದಿ ಕೋವಿಡ್‌ನಿಂದ ಸಾವಿಗೀಡಾಗಿದ್ದಾರೆ. ದೇಶದಲ್ಲಿನ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 4.50 ಕೋಟಿ (4,50,01,764) ಆಗಿದೆ. 

ಆರೋಗ್ಯ ಸಚಿವಾಲಯದ ವೆಬ್‌ಸೈಟ್ ಪ್ರಕಾರ, ಕೋವಿಡ್‌ನಿಂದ ಚೇತರಿಸಿಕೊಂಡವರ ಸಂಖ್ಯೆ 4,44,68,217ಕ್ಕೆ ಏರಿಕೆಯಾಗಿದೆ ಮತ್ತು ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.81 ರಷ್ಟಿದೆ.

ಮರಣ ಪ್ರಮಾಣ ಶೇ 1.19 ರಷ್ಟಿದೆ. ದೇಶದಲ್ಲಿ ಇದುವರೆಗೆ 220.67 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.