ದೆಹಲಿಯಲ್ಲಿ ವಾಯು ಗುಣಮಟ್ಟ ತೀವ್ರ ಕುಸಿತ: ಎಕ್ಯುಐ 400!
ದೆಹಲಿಯಲ್ಲಿ ವಾಯುಗುಣಮಟ್ಟ ತೀವ್ರ ಕುಸಿತ ಕಂಡಿದೆ. ದಟ್ಟವಾದ ಹೊಗೆ ಆವರಿಸಿದೆ.

ನವದೆಹಲಿ: ದೆಹಲಿಯಲ್ಲಿ ವಾಯುಗುಣಮಟ್ಟ ತೀವ್ರ ಕುಸಿತ ಕಂಡಿದೆ. ದಟ್ಟವಾದ ಹೊಗೆ ಆವರಿಸಿದೆ. ವಾಯುಮಾಲಿನ್ಯದ ಪರಿಣಾಮ ದೆಹಲಿಯಲ್ಲಿ ಕೇವಲ 600 ಮೀಟರ್ ಗಳ ವ್ಯಾಪ್ತಿಯಲ್ಲಿರುವುದು ಮಾತ್ರ ಕಾಣುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂದಿರ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 800 ಮೀಟರ್ ನಷ್ಟು ಗೋಚರತೆ ಇದೆ.
ಇದನ್ನೂ ಓದಿ: ದೆಹಲಿಯಲ್ಲಿ ವಾಯುಗುಣಮಟ್ಟ ತೀವ್ರ ಕುಸಿತ: ಎಕ್ಯುಐ 400!
ಭಾರತೀಯ ಹವಾಮಾನ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದ್ದು, ಹಗಲಿನಲ್ಲಿ ಗಾಳಿಯ ವೇಗ ಸ್ವಲ್ಪ ಹೆಚ್ಚಿರಲಿದ್ದು, ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿರುವ ಸಾಧ್ಯತೆ ಇದ್ದು, ರಿಲೀಫ್ ದೊರೆಯಲಿದೆ ಎಂದು ಹೇಳಿದೆ.
ಪ್ರತಿಕೂಲ ವಾತಾವರಣವು ಎರಡರಿಂದ ಮೂರು ದಿನಗಳವರೆಗೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಅಧಿಕಾರಿ ತಿಳಿಸಿದ್ದಾರೆ. ದೆಹಲಿಯ ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) ಬೆಳಿಗ್ಗೆ 9 ಗಂಟೆಗೆ 400 ರಷ್ಟಿತ್ತು. 24 ಗಂಟೆಗಳಲ್ಲಿ 400 ಎಕ್ಯುಐ ಅಂದರೆ ಒಂದು ದಿನದಲ್ಲಿ 22 ಸಿಗರೇಟ್ ಸೇದಿದಷ್ಟಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


