ಸುರಂಗ ಕುಸಿತದ ಸ್ಥಳಕ್ಕೆ ಪ್ರಧಾನಿ ಮೋದಿ ಕಚೇರಿಯ ನಿಯೋಗ ಭೇಟಿ, ಪರಿಶೀಲನೆ
ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ ಕಾರ್ಯದರ್ಶಿ ಪ್ರಮೋದ್ ಕುಮಾರ್ ಮಿಶ್ರಾ ನೇತೃತ್ವದ ನಿಯೋಗ ಸೋಮವಾರ ಉತ್ತರಖಂಡದ ಉತ್ತರಕಾಶಿಯಲ್ಲಿರುವ ಸಿಲ್ಕ್ಯಾರಾ ಸುರಂಗ ಕುಸಿತದ ಸ್ಥಳಕ್ಕೆ ಭೇಟಿ ನೀಡಿ, ರಕ್ಷಣಾ...

ಉತ್ತರಕಾಶಿ: ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ ಕಾರ್ಯದರ್ಶಿ ಪ್ರಮೋದ್ ಕುಮಾರ್ ಮಿಶ್ರಾ ನೇತೃತ್ವದ ನಿಯೋಗ ಸೋಮವಾರ ಉತ್ತರಖಂಡದ ಉತ್ತರಕಾಶಿಯಲ್ಲಿರುವ ಸಿಲ್ಕ್ಯಾರಾ ಸುರಂಗ ಕುಸಿತದ ಸ್ಥಳಕ್ಕೆ ಭೇಟಿ ನೀಡಿ, ರಕ್ಷಣಾ ಕಾರ್ಯಾಚರಣೆಯನ್ನು ಪರಿಶೀಲಿಸಿದ್ದಾರೆ.
ಸುರಂಗ ಕುಸಿತದಿಂದ ಒಳಗಡೆ ಸಿಲುಕಿರುವ 41 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಇಂದು 16ನೇ ದಿನಕ್ಕೆ ಕಾಲಿಟ್ಟಿದ್ದು, ಕಾರ್ಮಿಕರನ್ನು ರಕ್ಷಿಸಲು ನಡೆಯುತ್ತಿರುವ ಪ್ರಯತ್ನಗಳನ್ನು ಮಿಶ್ರಾ ಅವರು ಪರಿಶೀಲಿಸಿದರು.
ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಮತ್ತು ಉತ್ತರಾಖಂಡ ಮುಖ್ಯ ಕಾರ್ಯದರ್ಶಿ ಎಸ್.ಎಸ್.ಸಂಧು ಅವರು ಪ್ರಮೋದ್ ಕುಮಾರ್ ಮಿಶ್ರಾ ಅವರೊಂದಿಗೆ ಸುರಂಗದ ಒಳಗಿನ ಕಾಮಗಾರಿಯನ್ನು ಪರಿಶೀಲಿಸಿದರು.
ಸುರಂಗದೊಳಗೆ ಸಿಲುಕಿರುವ ಕಾರ್ಮಿಕರಿಗೆ ಕಳುಹಿಸಿದ ಆಹಾರ ಪದಾರ್ಥಗಳ ಬಗ್ಗೆಯೂ ಪ್ರಧಾನ ಕಾರ್ಯದರ್ಶಿ ವಿಚಾರಿಸಿದರು. ಅಲ್ಲದೆ ಸಿಕ್ಕಿಬಿದ್ದ ಕಾರ್ಮಿಕರು ಮತ್ತು ಅವರ ಕುಟುಂಬಗಳೊಂದಿಗೆ ಮಿಶ್ರಾ ಅವರು ಮಾತನಾಡಿದರು.
ಆಗರ್ ಯಂತ್ರದ ಎಲ್ಲಾ ಅವಶೇಷಗಳನ್ನು ತೆಗೆದುಹಾಕಲಾಗಿದೆ ಮತ್ತು ಸಿಕ್ಕಿಬಿದ್ದ ಕಾರ್ಮಿಕರನ್ನು ತಲುಪಲು ಕೈಯಿಂದಲೇ ಕೊರೆಯುವಿಕೆಯ ಕೆಲಸ ಕೆಲವೇ ಗಂಟೆಗಳಲ್ಲಿ ಪ್ರಾರಂಭವಾಗಲಿದೆ ಎಂದು ಸೂಕ್ಷ್ಮ ಸುರಂಗ ತಜ್ಞ ಕ್ರಿಸ್ ಕೂಪರ್ ಇಂದು ಬೆಳಗ್ಗೆ ಹೇಳಿದ್ದಾರೆ.
ಪೈಪ್‌ನೊಳಗೆ ಸಿಲುಕಿದ್ದ ಸುರಂಗ ಕೊರೆಯಲು ಬಳಸುತ್ತಿದ್ದ ಆಗರ್ ಯಂತ್ರವನ್ನು ಸೋಮವಾರ ಬೆಳಗ್ಗೆ ಪ್ಲಾಸ್ಮಾ ಕಟ್ಟರ್ ಬಳಸಿ ಕತ್ತರಿಸಿ ತೆಗೆಯಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


