ಕೇರಳ: ಬ್ಯಾಂಕ್ ನೋಟಿಸ್ ನೀಡಿದ ನಂತರ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ
ಬ್ಯಾಂಕ್ ನೋಟಿಸ್ ನೀಡಿದ ನಂತರ 73 ವರ್ಷದ ರೈತರೊಬ್ಬರು ಉತ್ತರ ಕೇರಳ ಜಿಲ್ಲೆಯ ಕೊಲಕ್ಕಾಡ್ನಲ್ಲಿರುವ ತನ್ನ ನಿವಾಸದಲ್ಲಿ ಸೋಮವಾರ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಲಕ್ಕಾಡ್: ಬ್ಯಾಂಕ್ ನೋಟಿಸ್ ನೀಡಿದ ನಂತರ 73 ವರ್ಷದ ರೈತರೊಬ್ಬರು ಉತ್ತರ ಕೇರಳ ಜಿಲ್ಲೆಯ ಕೊಲಕ್ಕಾಡ್ನಲ್ಲಿರುವ ತನ್ನ ನಿವಾಸದಲ್ಲಿ ಸೋಮವಾರ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದು ಆತ್ಮಹತ್ಯೆಯ ಪ್ರಕರಣ ಎಂದು ಪೊಲೀಸರು ಶಂಕಿಸಿದ್ದಾರೆ ಮತ್ತು ಸಾಲ ಮರುಪಾವತಿಯಲ್ಲಿ ವಿಫಲವಾದ ಕಾರಣ ಬ್ಯಾಂಕ್ ಅವರಿಗೆ ನೋಟಿಸ್ ನೀಡಿದ ನಂತರ ರೈತ ಎಂ ಆರ್ ಆಲ್ಬರ್ಟ್ ಮುಂಡಕ್ಕಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕೊಲಕ್ಕಾಡ್ ಡೈರಿ ಸಹಕಾರಿಯ ದೀರ್ಘಾವಧಿಯ ಅಧ್ಯಕ್ಷರಾಗಿದ್ದ ಆಲ್ಬರ್ಟ್ ಅವರು ತಮ್ಮ ಆಸ್ತಿಯನ್ನು ಒತ್ತೆ ಇಟ್ಟು ಕೇರಳ ಬ್ಯಾಂಕ್ನ ಪೆರವೂರ್ ಶಾಖೆಯಲ್ಲಿ 2 ಲಕ್ಷ ರೂ. ಸಾಲ ಪಡೆದಿದ್ದರು. ಮಂಗಳವಾರದೊಳಗೆ ಸಾಲ ಮರು ಪಾವತಿಸುವಂತೆ ಬ್ಯಾಂಕ್ ನೋಟಿಸ್ ನೀಡಿತ್ತು.
ಇದರಿಂದ ಒತ್ತಡಕ್ಕೆ ಸಿಲುಕಿದ ಆಲ್ಬರ್ಟ್ ಕೇರಳ ಸರ್ಕಾರದ ಮಹಿಳಾ ಸ್ವಸಹಾಯ ಸಂಘ ಕುಟುಂಬಶ್ರೀಯಿಂದ ಹಣಕಾಸಿನ ನೆರವು ಕೋರಿದ್ದರು ಎಂದು ಮೂಲಗಳು ತಿಳಿಸಿವೆ. ಆದರೆ ಅವರ ಪ್ರಯತ್ನಗಳು ವಿಫಲವಾಗಿವೆ. ಸನ್ನಿಹಿತವಾದ ಗಡುವು ಮತ್ತು ಹಣಕಾಸಿನ ಒತ್ತಡದಿಂದಾಗಿ ಅವರು ತಮ್ಮ ಜೀವವನ್ನೆ ಕಳೆದುಕೊಳ್ಳುವ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


