ದೇಶ

ವಿಶ್ವಕಪ್ ನಲ್ಲಿ ಭಾರತದ ಸೋಲನ್ನು ಸಂಭ್ರಮಿಸಿದ ಆರೋಪ: ಯುಎಪಿಎ ಅಡಿ ಏಳು ಕಾಶ್ಮೀರಿ ವಿದ್ಯಾರ್ಥಿಗಳ ಬಂಧನ

ಆಕ್ಷೇಪಾರ್ಹ ಘೋಷಣೆಗಳನ್ನು ಕೂಗಿ ವಿಶ್ವಕಪ್ ಫೈನಲ್‌ನಲ್ಲಿ ಭಾರತ ಕ್ರಿಕೆಟ್ ತಂಡದ ಸೋಲನ್ನು ಸಂಭ್ರಮಿಸಿದ ಆರೋಪದಲ್ಲಿಕೃಷಿ ವಿಶ್ವವಿದ್ಯಾಲಯದ ಏಳು ವಿದ್ಯಾರ್ಥಿಗಳನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ವಿಶ್ವಕಪ್ ನಲ್ಲಿ ಭಾರತದ ಸೋಲನ್ನು ಸಂಭ್ರಮಿಸಿದ ಆರೋಪ: ಯುಎಪಿಎ ಅಡಿ ಏಳು ಕಾಶ್ಮೀರಿ ವಿದ್ಯಾರ್ಥಿಗಳ ಬಂಧನ
ಸಾಂದರ್ಭಿಕ ಚಿತ್ರ
Published On :

ಜಮ್ಮು: ಆಕ್ಷೇಪಾರ್ಹ ಘೋಷಣೆಗಳನ್ನು ಕೂಗಿ ವಿಶ್ವಕಪ್ ಫೈನಲ್‌ನಲ್ಲಿ ಭಾರತ ಕ್ರಿಕೆಟ್ ತಂಡದ ಸೋಲನ್ನು ಸಂಭ್ರಮಿಸಿದ ಆರೋಪದಲ್ಲಿಕೃಷಿ ವಿಶ್ವವಿದ್ಯಾಲಯದ ಏಳು ವಿದ್ಯಾರ್ಥಿಗಳನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಬಂಧಿತ ಯುವಕರು ಕಾಶ್ಮೀರದ ಶೇರ್-ಎ-ಕಾಶ್ಮೀರ್ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ. 

ವಿಶ್ವಕಪ್  ಫೈನಲ್ ಪಂದ್ಯದಲ್ಲಿ ಭಾರತ ಸೋತು ಆಸ್ಟ್ರೇಲಿಯಾ  ಕಪ್ ಗೆದ್ದ ನಂತರ  ಕಾಲೇಜು ಸಹಪಾಠಿಗಳು ನನಗೆ ಕಿರುಕುಳ ನೀಡಿದ್ದಾರೆ ಮತ್ತು ಆಕ್ಷೇಪಾರ್ಹ ಘೋಷಣೆಗಳನ್ನು ಕೂಗಿದ್ದಾರೆ ಎಂದು ಆರೋಪಿಸಿ ಹೊರಗಿನ  ವಿದ್ಯಾರ್ಥಿಯೊಬ್ಬ ದಾಖಲಿಸಿದ ದೂರಿನ ಆಧಾರದಲ್ಲಿ ತನಿಖೆ ಆರಂಭಿಸಿದ ಪೊಲೀಸರು,  ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. 

ವಿದ್ಯಾರ್ಥಿಗಳ ವಿರುದ್ಧ ಯುಎಪಿಎ ಮತ್ತು ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.