ದೇಶ

ಅಮಿತ್ ಶಾ ವಿರುದ್ಧ 'ಆಕ್ಷೇಪಾರ್ಹ' ಹೇಳಿಕೆ: ರಾಹುಲ್ ಗಾಂಧಿಗೆ ಯುಪಿ ಕೋರ್ಟ್ ಸಮನ್ಸ್

ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ 'ಆಕ್ಷೇಪಾರ್ಹ' ಹೇಳಿಕೆ ನೀಡಿದ್ದಕ್ಕಾಗಿ 2018ರಲ್ಲಿ ದಾಖಲಾದ ಮಾನನಷ್ಟ ಕೇಸ್ ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜನಪ್ರತಿನಿಧಿಗಳ ಕೋರ್ಟ್ ಸಮನ್ಸ್ ನೀಡಿದೆ ಎಂದು ದೂರದಾರರ ಪರ ವಕೀಲರು ತಿಳಿಸಿದ್ದಾರೆ.

ಅಮಿತ್ ಶಾ ವಿರುದ್ಧ 'ಆಕ್ಷೇಪಾರ್ಹ' ಹೇಳಿಕೆ: ರಾಹುಲ್ ಗಾಂಧಿಗೆ ಯುಪಿ ಕೋರ್ಟ್ ಸಮನ್ಸ್
ರಾಹುಲ್ ಗಾಂಧಿ
Published On :

ಲಖನೌ: ಕೇಂದ್ರ ಗೃಹ  ಸಚಿವ ಅಮಿತ್ ಶಾ ವಿರುದ್ಧ 'ಆಕ್ಷೇಪಾರ್ಹ' ಹೇಳಿಕೆ ನೀಡಿದ್ದಕ್ಕಾಗಿ 2018ರಲ್ಲಿ ದಾಖಲಾದ ಮಾನನಷ್ಟ ಕೇಸ್ ನಲ್ಲಿ  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜನಪ್ರತಿನಿಧಿಗಳ ಕೋರ್ಟ್ ಸಮನ್ಸ್ ನೀಡಿದೆ ಎಂದು ದೂರದಾರರ ಪರ ವಕೀಲರು ತಿಳಿಸಿದ್ದಾರೆ. 

ಸೋಮವಾರ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶ ಯೋಗೇಶ್ ಯಾದವ್, ರಾಹುಲ್ ಗಾಂಧಿಗೆ ಸಮನ್ಸ್ ನೀಡಿದ್ದಾರೆ ಎಂದು ವಕೀಲ ಸಂತೋಷ್ ಪಾಂಡೆ ಹೇಳಿದರು.ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶಾ ವಿರುದ್ಧ "ಆಕ್ಷೇಪಾರ್ಹ" ಹೇಳಿಕೆ ನೀಡಿದ್ದ ಆರೋಪದ ಮೇಲೆ ಕಾಂಗ್ರೆಸ್ ನಾಯಕನ ವಿರುದ್ಧ ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು 2018 ರಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಪ್ರಾಮಾಣಿಕ ಮತ್ತು ಸ್ವಚ್ಛ ರಾಜಕಾರಣದಲ್ಲಿ ನಂಬಿಕೆ ಇದೆ ಎಂದು ಹೇಳಿಕೊಳ್ಳುವ ಬಿಜೆಪಿ, ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವವರನ್ನು ಅಧ್ಯಕ್ಷರನ್ನಾಗಿ ಹೊಂದಿದೆ ಎಂಬ ರಾಹುಲ್ ಗಾಂಧಿ  ಅವರ ಹೇಳಿಕೆಯನ್ನು ದೂರುದಾರರು ಉಲ್ಲೇಖಿಸಿದ್ದಾರೆ.

ರಾಹುಲ್ ಗಾಂಧಿ ಈ ಹೇಳಿಕೆ ನೀಡಿದಾಗ ಶಾ ಬಿಜೆಪಿ ಅಧ್ಯಕ್ಷರಾಗಿದ್ದರು. ಗಾಂಧಿಯವರ ಹೇಳಿಕೆಗೂ ಸುಮಾರು ನಾಲ್ಕು ವರ್ಷಗಳ ಮೊದಲು,ಮುಂಬೈನ ವಿಶೇಷ ಸಿಬಿಐ ನ್ಯಾಯಾಲಯ 2005 ರಲ್ಲಿ  ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಶಾ ಅವರನ್ನು ಬಿಡುಗಡೆ ಮಾಡಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.