ಜ್ಞಾನವಾಪಿ ಮಸೀದಿ: ವೈಜ್ಞಾನಿಕ ಸಮೀಕ್ಷೆ ವರದಿ ಸಲ್ಲಿಸಲು ಮತ್ತೆ ಸಮಯ ಕೋರಿದ ಎಎಸ್‌ಐ
ಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆ ವರದಿ ಸಲ್ಲಿಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ(ಎಎಸ್‌ಐ) ಮಂಗಳವಾರ ಇಲ್ಲಿನ ಜಿಲ್ಲಾ ನ್ಯಾಯಾಲಯಕ್ಕೆ ಮೂರು ವಾರಗಳ ಕಾಲಾವಕಾಶ ಕೋರಿದೆ.

ವಾರಣಾಸಿ: ಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆ ವರದಿ ಸಲ್ಲಿಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ(ಎಎಸ್‌ಐ) ಮಂಗಳವಾರ ಇಲ್ಲಿನ ಜಿಲ್ಲಾ ನ್ಯಾಯಾಲಯಕ್ಕೆ ಮೂರು ವಾರಗಳ ಕಾಲಾವಕಾಶ ಕೋರಿದೆ. ನ್ಯಾಯಾಲಯ ಬುಧವಾರ ಅರ್ಜಿಯ ವಿಚಾರಣೆ ನಡೆಸಲಿದೆ.
ವಾರಣಾಸಿಯ ಜಿಲ್ಲಾ ನ್ಯಾಯಾಲಯ ನವೆಂಬರ್ 28 ರೊಳಗೆ ಜ್ಞಾನವಾಪಿ ಮಸೀದಿ ಸಂಕೀರ್ಣದ ವರದಿ ಸಲ್ಲಿಸುವಂತೆ ಎಎಸ್‌ಐಗೆ ಸೂಚಿಸಿತ್ತು.
ಇಂದು ಎಎಸ್‌ಐ ವರದಿ ಸಲ್ಲಿಸಲು ಇನ್ನೂ ಮೂರು ವಾರಗಳ ಕಾಲಾವಕಾಶ ಕೋರಿ ಅರ್ಜಿ ಸಲ್ಲಿಸಿದೆ. ವಿಭಿನ್ನ ತಜ್ಞರು ರಚಿಸಿದ ಮಾಹಿತಿಯನ್ನು ಒಟ್ಟುಗೂಡಿಸಲು ಹೆಚ್ಚಿನ ಸಮಯ ಬೇಕಾಗುತ್ತದೆ ಎಂದು ಹಿಂದೂ ಪರ ವಕೀಲ ಮದನ್ ಮೋಹನ್ ಯಾದವ್ ಅವರು ತಿಳಿಸಿದ್ದಾರೆ.
ಪುರಾತತ್ವಶಾಸ್ತ್ರಜ್ಞರು, ಸರ್ವೇಯರ್‌ಗಳು ಮತ್ತು ಇತರ ತಜ್ಞರು ಸಂಗ್ರಹಿಸಿದ ವಿವಿಧ ರೀತಿಯ ದತ್ತಾಂಶಗಳ ಮೇಲೆ ತಜ್ಞರು ಕೆಲಸ ಮಾಡುತ್ತಿದ್ದಾರೆ ಎಂದು ಎಎಸ್‌ಐ ತನ್ನ ಅರ್ಜಿಯಲ್ಲಿ ತಿಳಿಸಿದೆ.
"ವಿವಿಧ ತಜ್ಞರು ಮತ್ತು ವಿಭಿನ್ನ ಸಾಧನಗಳಿಂದ ರಚಿಸಲಾದ ಮಾಹಿತಿಯನ್ನು ಒಟ್ಟುಗೂಡಿಸುವುದು ಕಷ್ಟಕರ ಮತ್ತು ನಿಧಾನ ಪ್ರಕ್ರಿಯೆಯಾಗಿದೆ. ಅಂತಿಮವಾಗಿ ವರದಿ ಸಿದ್ಧಪಡಿಸಲು ಇನ್ನೂ ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಆದ್ದರಿಂದ ಅದನ್ನು ಸಲ್ಲಿಸಲು ಎಎಸ್‌ಐಗೆ ಇನ್ನೂ ಮೂರು ವಾರಗಳ ಕಾಲಾವಕಾಶ ನೀಡುವಂತೆ ನ್ಯಾಯಾಲಯವನ್ನು ಕೋರಲಾಗಿದೆ" ಎಂದು ಯಾದವ್ ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


