ಮುಂಬೈ: ನೌಕಾಪಡೆಯಲ್ಲಿ ಅಗ್ನಿವೀರ್ ತರಬೇತಿ ಪಡೆಯುತ್ತಿದ್ದ ಕೇರಳ ಮೂಲದ 20 ವರ್ಷದ ಯುವತಿ ಆತ್ಮಹತ್ಯೆ
ಭಾರತೀಯ ನೌಕಾಪಡೆಯಲ್ಲಿ ಅಗ್ನಿವೀರ್ ತರಬೇತಿ ಪಡೆಯುತ್ತಿದ್ದ 20 ವರ್ಷದ ಮಹಿಳೆ ಮುಂಬೈನ ಐಎನ್‌ಎಸ್ ಹಮ್ಲಾದಲ್ಲಿರುವ ತನ್ನ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಮುಂಬೈ: ಭಾರತೀಯ ನೌಕಾಪಡೆಯಲ್ಲಿ ಅಗ್ನಿವೀರ್ ತರಬೇತಿ ಪಡೆಯುತ್ತಿದ್ದ 20 ವರ್ಷದ ಮಹಿಳೆ ಮುಂಬೈನ ಐಎನ್‌ಎಸ್ ಹಮ್ಲಾದಲ್ಲಿರುವ ತನ್ನ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಕೇರಳ ಮೂಲದ ಯುವತಿ ಮಲಾಡ್‌ನ ಪಶ್ಚಿಮ ಉಪನಗರದಲ್ಲಿರುವ ಮಾಲ್ವಾನಿ ಪ್ರದೇಶದ ಐಎನ್‌ಎಸ್ ಹಮ್ಲಾದಲ್ಲಿ ತರಬೇತಿ ಪಡೆಯುತ್ತಿದ್ದರು. ಸೋಮವಾರ ಬೆಳಗ್ಗೆ ಆಕೆ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನಾ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲದಿದ್ದರೂ, ವೈಯಕ್ತಿಕ ಕಾರಣಗಳಿಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಯುವತಿ ತನ್ನ ಮೂಲಭೂತ ತರಬೇತಿಯನ್ನು ಪೂರ್ಣಗೊಳಿಸಿದ ನಂತರ ಕಳೆದ 15 ದಿನಗಳಿಂದ ಈ ಸೌಲಭ್ಯದಲ್ಲಿ ತರಬೇತಿ ಪಡೆಯುತ್ತಿದ್ದರು ಎಂದು ಅವರು ಹೇಳಿದರು.
ಇದನ್ನೂ ಓದಿ: ಸಿಯಾಚಿನ್ ಗ್ಲೇಸಿಯರ್ನಲ್ಲಿ ಅಗ್ನಿವೀರ್ ಯೋಧನ ಸಾವು: ನಿಯಮ ಮರುಪರಿಶೀಲಿಸುವ ಚಿಂತನೆ ಇಲ್ಲ ಎಂದ ಸರ್ಕಾರ!
ಪೊಲೀಸರು ಆಕಸ್ಮಿಕ ಸಾವಿನ ವರದಿಯನ್ನು (ಎಡಿಆರ್) ದಾಖಲಿಸಿಕೊಂಡಿದ್ದಾರೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಅಗ್ನಿವೀರ್‌ಗಳು 2022ರಲ್ಲಿ ಪರಿಚಯಿಸಲಾದ ಅಗ್ನಿಪಥ್ ಯೋಜನೆಯಡಿ ಸಶಸ್ತ್ರ ಪಡೆಗಳಿಗೆ ನೇಮಕಗೊಂಡಂತ ಸೈನಿಕರು.
ನೂತನ ಅಗ್ನಿಪಥ್ ಯೋಜನೆ ಅಡಿಯಲ್ಲಿ ಭಾರತೀಯ ಸೇನೆಯ ಮೂರು ವಿಭಾಗಗಳಲ್ಲಿ ಕೆಲಸ ಮಾಡಲು ಇಚ್ಛಿಸುವ ಯುವಕ-ಯುವತಿಯರು ತರಬೇತಿ ಸೇರಿದಂತೆ ನಾಲ್ಕು ವರ್ಷಗಳ ಕಾಲ 'ಅಗ್ನಿವೀರ್' ಎಂಬ ಹೆಸರಿನ ಯೋಧರಾಗಿ ಕೆಲಸ ಮಾಡಬಹುದಾಗಿದೆ. ನಾಲ್ಕು ವರ್ಷಗಳಲ್ಲಿ ಮೊದಲಿಗೆ ಆರು ತಿಂಗಳ ಕಠಿ ತರಬೇತಿ ಪಡೆಯಬೇಕಿರುತ್ತದೆ. ಅಗ್ನಿವೀರರಾಗಲು 10ನೇ ತರಗತಿ ಮತ್ತು ಪಿಯುಸಿ ಪಾಸಾದವರು ಅರ್ಹರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


