ದೇಶ

ಮುಂಬೈ: ಗ್ಯಾಸ್ ಸಿಲಿಂಡರ್ ಸ್ಫೋಟ; ಕುಸಿದುಬಿದ್ದ ಐದು ಮನೆಗಳು, 11 ಜನರ ರಕ್ಷಣೆ

ಮುಂಬೈನ ಚೆಂಬೂರ್ ಪ್ರದೇಶದಲ್ಲಿ ಬುಧವಾರ ಬೆಳಗ್ಗೆ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಪರಿಣಾಮ ಐದು ಮನೆಗಳು ಕುಸಿದು ಬಿದ್ದಿವೆ. ಮನೆಯಲ್ಲಿದ್ದ 11 ಜನರನ್ನು ರಕ್ಷಿಸಲಾಗಿದೆ ಎಂದು ಮುಂಬೈ ಮಹಾನಗರ ಪಾಲಿಕೆ...

ಮುಂಬೈ: ಗ್ಯಾಸ್ ಸಿಲಿಂಡರ್ ಸ್ಫೋಟ; ಕುಸಿದುಬಿದ್ದ ಐದು ಮನೆಗಳು, 11 ಜನರ ರಕ್ಷಣೆ
ಸಾಂದರ್ಭಿಕ ಚಿತ್ರ
Published On :

ಮುಂಬೈ: ಮುಂಬೈನ ಚೆಂಬೂರ್ ಪ್ರದೇಶದಲ್ಲಿ ಬುಧವಾರ ಬೆಳಗ್ಗೆ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಪರಿಣಾಮ ಐದು ಮನೆಗಳು ಕುಸಿದು ಬಿದ್ದಿವೆ. ಮನೆಯಲ್ಲಿದ್ದ 11 ಜನರನ್ನು ರಕ್ಷಿಸಲಾಗಿದೆ ಎಂದು ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

ಅವಶೇಷಗಳಿಂದ 11 ಜನರನ್ನು ರಕ್ಷಿಸಲಾಗಿದ್ದು, ಅವರಲ್ಲಿ ಕೆಲವರು ಗಾಯಗೊಂಡಿದ್ದಾರೆ ಅಧಿಕಾರಿಗಳು ಹೇಳಿದ್ದಾರೆ.

ಚೆಂಬೂರ್ ಪ್ರದೇಶದ ಗಾಲ್ಫ್ ಕ್ಲಬ್ ಬಳಿಯ ಓಲ್ಡ್ ಬ್ಯಾರಕ್ ನಲ್ಲಿ ಇಂದು ಬೆಳಗ್ಗೆ 7.50ಕ್ಕೆ ಈ ಘಟನೆ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ.

ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಎರಡು ಅಂತಸ್ತಿನ ನಾಲ್ಕರಿಂದ ಐದು ಕಟ್ಟಡಗಳು ಕುಸಿದು ಬಿದ್ದಿವೆ ಎಂದು ಮಹಾನಗರ ಪಾಲಿಕೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕುಸಿದ ಮನೆಗಳಿಂದ ಹನ್ನೊಂದು ಜನರನ್ನು ರಕ್ಷಿಸಲಾಗಿದೆ. ಇದುವರೆಗೆ ಗಾಯಗೊಂಡ ನಾಲ್ವರನ್ನು ಗೋವಂಡಿಯಲ್ಲಿರುವ ಮಹಾನಗರ ಪಾಲಿಕೆಯ ಶತಾಬ್ದಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.