ಕರ್ನಾಟಕದ ಚುನಾವಣಾ ಫಲಿತಾಂಶ ತೆಲಂಗಾಣದಲ್ಲೂ ಪುನರಾವರ್ತನೆಯಾಗಲಿದೆ: ರೇವಂತ್ ರೆಡ್ಡಿ
ಕರ್ನಾಟಕದ ಚುನಾವಣಾ ಫಲಿತಾಂಶ ತೆಲಂಗಾಣದಲ್ಲೂ ಪುನರಾವರ್ತನೆಯಾಗಲಿದೆ ಎಂದು ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ಭಾರಿ ಭದ್ರತೆಯ ನಡುವೆ ರಾಜ್ಯದ ವಿವಿಧ ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದೆ.

ಹೈದರಾಬಾದ್: ಕರ್ನಾಟಕದ ಚುನಾವಣಾ ಫಲಿತಾಂಶ ತೆಲಂಗಾಣದಲ್ಲೂ ಪುನರಾವರ್ತನೆಯಾಗಲಿದೆ ಎಂದು ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು.
ಭಾರಿ ಭದ್ರತೆಯ ನಡುವೆ ರಾಜ್ಯದ ವಿವಿಧ ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದೆ.
ಮತ ಚಲಾಯಿಸಿದ ನಂತರ ಸುದ್ದಿಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ಅವರು, 'ಕಾಂಗ್ರೆಸ್ ಮೂರನೇ ಎರಡರಷ್ಟು ಬಹುಮತದೊಂದಿಗೆ ಸರ್ಕಾರ ರಚಿಸಲುತ್ತದೆ. ನಾವು ತೆಲಂಗಾಣದಲ್ಲಿ ಕರ್ನಾಟಕದ ಫಲಿತಾಂಶಗಳನ್ನು ಪುನರಾವರ್ತಿಸುತ್ತೇವೆ. ಭಾರತ್ ಜೋಡೋ ಯಾತ್ರೆಯ ನಂತರ ತೆಲಂಗಾಣದಲ್ಲಿ ನೆಲದ ಪರಿಸ್ಥಿತಿ ಸಾಕಷ್ಟು ಬದಲಾಗಿದೆ' ಎಂದು ಹೇಳಿದರು.
ಒಂದು ವೇಳೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿಯಾಗುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, 85 ಶಾಸಕರಿದ್ದಾರೆ, ಎಲ್ಲರೂ ಸಿಎಂ ಹುದ್ದೆಗೆ ಸಮರ್ಥರು, ಆ ಕ್ರಿಯೆಗೆ ಪ್ರಕ್ರಿಯೆಯೊಂದು ಇದೆ ಎಂದರು.
ಮತ ಚಲಾಯಿಸುವ ಮೊದಲು, ಸಿಎಂ ಕೆ ಚಂದ್ರಶೇಖರ ರಾವ್ ನೇತೃತ್ವದ ಆಡಳಿತಾರೂಢ ಬಿಆರ್‌ಎಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ರೇವಂತ್ ರೆಡ್ಡಿ, '10 ವರ್ಷಗಳ ಕೆಸಿಆರ್ ಸರ್ಕಾರದಲ್ಲಿ ರಾಜ್ಯದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜನರ ನಿರೀಕ್ಷೆಗಳನ್ನು ಈಡೇರಿಸಲು ಕಾಂಗ್ರೆಸ್ ಎಲ್ಲ ರೀತಿಯ ಪ್ರಯತ್ನ ಮಾಡಲಿದೆ. ತೆಲಂಗಾಣದ ಭವಿಷ್ಯವನ್ನು 'ಮುಂದಕ್ಕೆ' ಕೊಂಡೊಯ್ಯುವಲ್ಲಿ ಮೊದಲ ಬಾರಿಗೆ ಮತ ಚಲಾಯಿಸುತ್ತಿರುವವರ ಮೇಲೆ ಅವರು ಹೆಚ್ಚಿನ ನಿರೀಕ್ಷೆಯನ್ನು ಹೊಂದಿರುವುದಾಗಿ ಹೇಳಿದರು.
ಬಿಆರ್‌ಎಸ್, ಬಿಜೆಪಿ ಮತ್ತು ಎಐಎಂಐಎಂ ನಡುವೆ ಚುನಾವಣಾ ಪೂರ್ವ ನಂಟು ಇದೆ ಎಂದು ಆರೋಪಿಸಿದ ಅವರು, 'ಅವರು ಒಟ್ಟಾಗಿ ಕಾಂಗ್ರೆಸ್ ಅನ್ನು ಸೋಲಿಸಲು ಪ್ರಯತ್ನಿಸುತ್ತಿದ್ದಾರೆ...' ಎಂದರು.
ಮತದಾನಕ್ಕೂ ಮುನ್ನ ಕಾಂಗ್ರೆಸ್ ಮುಖಂಡ ವಿಕಾರಾಬಾದ್‌ನ ಕೊಡಂಗಲ್‌ನಲ್ಲಿರುವ ಅವರ ನಿವಾಸದಲ್ಲಿ ಪತ್ನಿ ಗೀತಾ ಅವರೊಂದಿಗೆ ಪೂಜೆ ಸಲ್ಲಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


