ಬಿಹಾರ ಜಾತಿ ಸಮೀಕ್ಷೆ ಬಹಿರಂಗ: ವಿವರ ಹೀಗಿದೆ...
ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರ ಅ.02 ರಂದು ಜಾತಿ ಸಮೀಕ್ಷೆಯ ವಿವರಗಳನ್ನು ಬಹಿರಂಗಗೊಳಿಸಿದೆ.

ಬಿಹಾರ: ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರ ಅ.02 ರಂದು ಜಾತಿ ಸಮೀಕ್ಷೆಯ ವಿವರಗಳನ್ನು ಬಹಿರಂಗಗೊಳಿಸಿದೆ.
ಸಮೀಕ್ಷೆಯ ಪ್ರಕಾರ ಒಬಿಸಿ ಹಾಗೂ ಅತಿ ಹಿಂದುಳಿದ ವರ್ಗಗಳು ರಾಜ್ಯದ ಜನಸಂಖ್ಯೆಯ ಶೇ.63 ರಷ್ಟಿದ್ದಾರೆ. ಅಭಿವೃದ್ಧಿ ಆಯುಕ್ತ ವಿವೇಕ್ ಸಿಂಗ್ ಈ ಅಂಕಿ-ಅಂಶಗಳನ್ನು ಬಹಿರಂಗಗೊಳಿಸಿದ್ದು, ರಾಜ್ಯದಲ್ಲಿ ಒಟ್ಟು 13.07 ಕೋಟಿ ಜನ ಸಂಖ್ಯೆ ಇದ್ದರೆ, ಈ ಪೈಕಿ ಶೇ.36 ರಷ್ಟು ಅತಿ ಹಿಂದುಳಿದ ವರ್ಗಗಳ ಜನರಿದ್ದಾರೆ. ಈ ನಂತರದ ಸ್ಥಾನದಲ್ಲಿ ಒಬಿಸಿ ವರ್ಗಕ್ಕೆ ಸೇರಿದ ಮಂದಿ ಒಟ್ಟು ಶೇ.27.13 ರಷ್ಟಿದ್ದಾರೆ.
ಇದನ್ನೂ ಓದಿ: ನಿತೀಶ್ ಕುಮಾರ್ ಪ್ರಧಾನಿ ಅಭ್ಯರ್ಥಿಯಾಗಲಿ ಎಂದ ಆರ್ ಜೆಡಿ
ಒಬಿಸಿ ಗುಂಪಿಗೆ ಸೇರುವ ಯಾದವರು, ಡಿಸಿಎಂ ತೇಜಸ್ವಿ ಯಾದವ್ ಅವರು ಪ್ರತಿನಿಧಿಸುವ ಸಮುದಾಯ ಜನಸಂಖ್ಯೆಯ ಪೈಕಿ ಅತಿ ಹೆಚ್ಚು ಪ್ರಮಾಣದಲ್ಲಿ ಅಂದರೆ ಶೇ.14.27 ರಷ್ಟು ಇದ್ದಾರೆ.
ವಿಶೇಷವೆಂದರೆ, ಕಳೆದ ವರ್ಷ ಕೇಂದ್ರದ ನರೇಂದ್ರ ಮೋದಿ ಸರ್ಕಾರವು ಜನಗಣತಿಯ ಭಾಗವಾಗಿ ಎಸ್‌ಸಿ ಮತ್ತು ಎಸ್‌ಟಿಗಳನ್ನು ಹೊರತುಪಡಿಸಿ ಇತರ ಜಾತಿಗಳ ಎಣಿಕೆಯನ್ನು ಕೈಗೊಳ್ಳಲು ಸಾಧ್ಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ ನಂತರ ಸಮೀಕ್ಷೆಗೆ ಬಿಹಾರದಲ್ಲಿ ಆದೇಶಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


