ಚೀನಾದಿಂದ ಕಾನೂನುಬಾಹಿರ ದೇಣಿಗೆ ಸಂಗ್ರಹ ಆರೋಪ: ನ್ಯೂಸ್‌ಕ್ಲಿಕ್‌ನ 30 ಪತ್ರಕರ್ತರ ಮನೆಗಳ ಮೇಲೆ ಪೊಲೀಸರ ದಾಳಿ
ಚೀನಾದಿಂದ ಹಣ ಹೂಡಿಕೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಡಿಜಿಟಲ್ ಮಾಧ್ಯಮ ಸಂಸ್ಥೆ ಪತ್ರಕರ್ತರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ವ್ಯಾಪ್ತಿಯಲ್ಲಿ ನ್ಯೂಸ್‌ಕ್ಲಿಕ್‌ನ 30ಕ್ಕೂ ಅಧಿಕ ಪತ್ರಕರ್ತರ ನಿವಾಸಗಳ ಮೇಲೆ ದೆಹಲಿ ಪೊಲೀಸ್ ಸ್ಪೆಷಲ್ ಸೆಲ್ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ಮಾಡಿದ್ದಾರೆ .

ನವದೆಹಲಿ: ಚೀನಾದಿಂದ ಹಣ ಹೂಡಿಕೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಡಿಜಿಟಲ್ ಮಾಧ್ಯಮ ಸಂಸ್ಥೆ ಪತ್ರಕರ್ತರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ವ್ಯಾಪ್ತಿಯಲ್ಲಿ ನ್ಯೂಸ್‌ಕ್ಲಿಕ್‌ನ 30ಕ್ಕೂ ಅಧಿಕ ಪತ್ರಕರ್ತರ ನಿವಾಸಗಳ ಮೇಲೆ ದೆಹಲಿ ಪೊಲೀಸ್ ಸ್ಪೆಷಲ್ ಸೆಲ್ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಹಾಗೆಯೇ, ನ್ಯೂಸ್‌ಕ್ಲಿಕ್ ವಿರುದ್ಧ ಕಾನೂನಬಾಹಿರ ಚಟುವಟಿಕೆಗಳ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಚೀನಾದಿಂದ ಹಣ ಹೂಡಿಕೆಗೆ ಸಂಬಂಧಿಸಿದಂತೆ ಈಗಾಗಲೇ ಜಾರಿ ನಿರ್ದೇಶನಾಲಯವು ನ್ಯೂಸ್‌ಕ್ಲಿಕ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದೆ.
ಇದರ ಬೆನ್ನಲ್ಲೇ, ನ್ಯೂಸ್‌ಕ್ಲಿಕ್‌ನ ಹಲವು ಪತ್ರಕರ್ತರ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಖಲೆ ಪರಿಶೀಲನೆಯಷ್ಟೇ ಮಾಡಲಾಗಿದ್ದು, ಯಾರನ್ನೂ ಬಂಧಿಸಿಲ್ಲ ಎಂದು ಮೂಲಗಳು ತಿಳಿಸಿವೆ. ಆದರೆ, ವಿಚಾರಣೆಗಾಗಿ ಕೆಲವು ಪತ್ರಕರ್ತರನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ಕೂಡ ತಿಳಿದುಬಂದಿದೆ.
ದೆಹಲಿ, ನೋಯ್ಡಾ ಹಾಗೂ ಗಾಜಿಯಾಬಾದ್‌ನ 30ಕ್ಕೂ ಹೆಚ್ಚು ಕಡೆಗಳಲ್ಲಿ ದಿಲ್ಲಿ ಪೊಲೀಸರು ಬೃಹತ್ ಪ್ರಮಾಣದ ದಾಳಿ ನಡೆಸಿದ್ದಾರೆ. ಅಕ್ರಮ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿ ವಿಶೇಷ ಘಟಕವು ಪ್ರಕರಣ ದಾಖಲಿಸಿಕೊಂಡಿದೆ.
ಇದಕ್ಕೂ ಮುನ್ನ ನ್ಯೂಸ್ ಪೋರ್ಟಲ್‌ನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದ ಜಾರಿ ನಿರ್ದೇಶನಾಲಯ (ಇ.ಡಿ), ಅದರ ಫಂಡಿಂಗ್ ಕುರಿತು ತನಿಖೆ ಆರಂಭಿಸಿತ್ತು. ನ್ಯೂಸ್ ಪೋರ್ಟಲ್‌ಗೆ ಸಂಬಂಧಿಸಿದ ಕೆಲವು ಆಸ್ತಿಗಳನ್ನು ಕೂಡ ಕೇಂದ್ರ ಸಂಸ್ಥೆ ಮುಟ್ಟುಗೋಲು ಹಾಕಿಕೊಂಡಿತ್ತು. ಬುಧವಾರದ ದಾಳಿ ವೇಳೆ ಪೊಲೀಸರು ಲ್ಯಾಪ್‌ಟಾಪ್, ಮೊಬೈಲ್ ಫೋನ್‌ಗಳು ಸೇರಿದಂತೆ ಎಲೆಕ್ಟ್ರಾನಿಕ್ ಸಾಕ್ಷ್ಯಗಳನ್ನು ಜಪ್ತಿ ಮಾಡಿದ್ದು, ಹಾರ್ಡ್ ಡಿಸ್ಕ್‌ಗಳಲ್ಲಿನ ಡೇಟಾಗಳನ್ನು ಪಡೆದುಕೊಳ್ಳುತ್ತಿದ್ದಾರೆ.
ನ್ಯೂಸ್‌ಕ್ಲಿಕ್‌ನಲ್ಲಿ ಚೀನಾ ಹೂಡಿಕೆ ಕುರಿತು ಕಳೆದ ಆಗಸ್ಟ್‌ನಲ್ಲಿ ಅಮೆರಿಕದ ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿತ್ತು. ಚೀನಾದ ಪರವಾಗಿ ನಿಲುವು ಹೊಂದಿರುವ, ಚೀನಾ ನಿರ್ಧಾರಗಳನ್ನು ಬೆಂಬಲಿಸುವ ಅಮೆರಿಕದ ಉದ್ಯಮಿ ನೆವಿಲ್ಲೆ ರಾಯ್ ಸಿಂಘಂ ಎಂಬುವರು ಹಲವು ಸಂಸ್ಥೆಗಳಲ್ಲಿ ಹೂಡಿಕೆ ಮಾಡಿದ್ದು, ಇವುಗಳಲ್ಲಿ ನ್ಯೂಸ್‌ಕ್ಲಿಕ್ ಕೂಡ ಇದೆ” ಎಂದು ತನಿಖಾ ವರದಿಯಲ್ಲಿ ಉಲ್ಲೇಖಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


