ಎಎಪಿ ನಾಯಕ ಸಂಜಯ್ ಸಿಂಗ್ ಮನೆ ಮೇಲೆ ED ದಾಳಿ
ಮಹತ್ವದ ಬೆಳವಣಿಗೆಯಲ್ಲಿ ಆಮ್ ಆದ್ಮಿ ಪಕ್ಷದ ನಾಯಕ ಸಂಜಯ್ ಸಿಂಗ್ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಆಮ್ ಆದ್ಮಿ ಪಕ್ಷದ ನಾಯಕ ಸಂಜಯ್ ಸಿಂಗ್ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮದ್ಯನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ರಾಜ್ಯಸಭಾ ಸಂಸದರೂ ಆಗಿರುವ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಸಂಜಯ್ ಸಿಂಗ್ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಇದನ್ನೂ ಓದಿ: ನ್ಯೂಸ್ಕ್ಲಿಕ್' ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಬಂಧನ!
ದೆಹಲಿಯಲ್ಲಿರುವ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದ್ದು ವ್ಯಾಪಕ ಪೊಲೀಸರನ್ನು ಮತ್ತು ಭದ್ರತಾ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.
ಈ ಹಿಂದೆ ದೆಹಲಿಯ ಎಎಪಿ ಸರ್ಕಾರದ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು 2021 ರ ದೆಹಲಿ ಸರ್ಕಾರದ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಜೈಲಿನಲ್ಲಿದ್ದಾರೆ. ಈ ಹಿಂದೆ ಏಪ್ರಿಲ್‌ನಲ್ಲಿ ಇದೇ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸುಮಾರು ಒಂಬತ್ತು ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿತ್ತು. ಇದೀಗ ಇಡಿ ದಾಳಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


