ದೆಹಲಿ ಅಬಕಾರಿ ನೀತಿ ಹಗರಣ: ಎಎಪಿ ಸಂಸದ ಸಂಜಯ್ ಸಿಂಗ್ ಬಂಧನ
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಬುಧವಾರ ಎಎಪಿ ಸಂಸದ ಸಂಜಯ್ ಸಿಂಗ್ ಅವರನ್ನು ಬಂಧಿಸಿದೆ.

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಬುಧವಾರ ಎಎಪಿ ಸಂಸದ ಸಂಜಯ್ ಸಿಂಗ್ ಅವರನ್ನು ಬಂಧಿಸಿದೆ.
ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಇಂದು ಬೆಳಗ್ಗೆ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು, ಸತತ 11 ಗಂಟೆಗಳ ವಿಚಾರಣೆ ಬಳಿಕ ಅವರನ್ನು ಬಂಧಿಸಿದೆ.
ಇದನ್ನು ಓದಿ: ಎಎಪಿ ನಾಯಕ ಸಂಜಯ್ ಸಿಂಗ್ ಮನೆ ಮೇಲೆ ED ದಾಳಿ
ಸಂಜಯ್ ಸಿಂಗ್ ಅವರು ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತರಾದ ಎರಡನೇ ಎಎಪಿ ನಾಯಕರಾಗಿದ್ದಾರೆ. ಈ ಮುಂಚೆ ಇದೇ ಪ್ರಕರಣ ಸಂಬಂಧ ದೆಹಲಿ ಉಪ ಮುಖ್ಯಮಂತ್ರಿಯಾಗಿದ್ದ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಲಾಗಿದೆ.
ಅಬಕಾರಿ ನೀತಿ ಹಗರಣದ ಸಂಬಂಧ ಜಾರಿ ನಿರ್ದೇಶನಾಲಯ ಅಥವಾ ಸಿಬಿಐ ದಾಖಲಿಸಿರುವ ಆರೋಪ ಪಟ್ಟಿಗಳಲ್ಲಿ ಸಂಜಯ್ ಸಿಂಗ್ ಅವರ ಹೆಸರು ಇಲ್ಲ. ಆದರೆ ಈ ಪ್ರಕರಣದಲ್ಲಿ ಪ್ರಮುಖ ಸಾಕ್ಷಿದಾರನಾಗಿರುವ ಆರೋಪಿ ಉದ್ಯಮಿ ದಿನೇಶ್ ಅರೋರಾ ಅವರು ಸಂಜಯ್ ಸಿಂಗ್ ಹೆಸರು ಪ್ರಸ್ತಾಪಿಸಿದ್ದರು. ಇದರ ಆಧಾರದಲ್ಲಿ ಇಡಿ ದಾಳಿ ನಡೆಸಿದೆ.
ಲಿಕ್ಕರ್ ನೀತಿಯಲ್ಲಿ ಲಾಬಿ ನಡೆಸಲು ಹಾಗೂ ಕಿಕ್ ಬ್ಯಾಕ್ ಚಟುವಟಿಕೆಗಳಲ್ಲಿ ಉದ್ಯಮಿ ದಿನೇಶ್ ಅರೋರಾ ಭಾಗಿಯಾಗಿದ್ದಾರೆ ಎಂದು ಇಡಿ ಆರೋಪಿಸಿದೆ.
ಕಳೆದ ಮೇ ತಿಂಗಳ ಆರಂಭದಲ್ಲಿ, ಸಂಜಯ್ ಸಿಂಗ್ ಅವರು ಹಣಕಾಸು ಕಾರ್ಯದರ್ಶಿ ಟಿ ವಿ ಸೋಮನಾಥನ್ ಅವರಿಗೆ ಬರೆದ ಪತ್ರವೊಂದರಲ್ಲಿ, ಇಡಿ ನಿರ್ದೇಶಕರು ಮತ್ತು ಸಹಾಯಕ ನಿರ್ದೇಶಕರು ಉದ್ದೇಶಪೂರ್ವಕವಾಗಿ ಯಾವುದೇ ಆಧಾರವಿಲ್ಲದೆ ಮದ್ಯ ಹಗರಣದಲ್ಲಿ ತಮ್ಮ ಹೆಸರನ್ನು ಸೇರಿಸಿದ್ದಾರೆ. ಈ ಮೂಲಕ ನನ್ನ ಗೌರವಕ್ಕೆ ಮತ್ತು ಪ್ರತಿಷ್ಠೆಗೆ ಧಕ್ಕೆ ಮಾಡಿದ್ದಾರೆ ಎಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


