ನಕ್ಸಲಿಸಂ ಮಾನವ ಕುಲಕ್ಕೆ ಶಾಪವಾಗಿದೆ: ಕೇಂದ್ರ ಗೃಹ ಸಚಿವ ಅಮಿತ್ ಶಾ
ನಕ್ಸಲಿಸಂ "ಮಾನವ ಕುಲಕ್ಕೆ ಶಾಪ" ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಕೇಂದ್ರ ಸರ್ಕಾರವು ಎಡಪಂಥೀಯ ಉಗ್ರವಾದವನ್ನು ಅದರ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳಲ್ಲಿ ಬೇರುಸಹಿತ ಕಿತ್ತೊಗೆಯಲು ಬದ್ಧವಾಗಿದೆ ಎಂದು ಹೇಳಿದರು.

ನವದೆಹಲಿ: ನಕ್ಸಲಿಸಂ "ಮಾನವ ಕುಲಕ್ಕೆ ಶಾಪ" ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಕೇಂದ್ರ ಸರ್ಕಾರವು ಎಡಪಂಥೀಯ ಉಗ್ರವಾದವನ್ನು ಅದರ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳಲ್ಲಿ ಬೇರುಸಹಿತ ಕಿತ್ತೊಗೆಯಲು ಬದ್ಧವಾಗಿದೆ ಎಂದು ಹೇಳಿದರು.
ರಾಷ್ಟ್ರ ರಾಜಧಾನಿಯಲ್ಲಿ ಎಡಪಂಥೀಯ ಉಗ್ರವಾದದ (LWE) ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸುವ ಕೆಲವು ಗಂಟೆಗಳ ಮೊದಲು ಶಾ ತಮ್ಮ ಅಭಿಪ್ರಾಯವನ್ನು ಟ್ವೀಟ್ ಮಾಡಿದ್ದಾರೆ.
ನಕ್ಸಲಿಸಂ ಮಾನವೀಯತೆಗೆ ಶಾಪವಾಗಿದೆ, ಅದನ್ನು ಅದರ ಎಲ್ಲಾ ರೂಪಗಳಲ್ಲಿ ಬೇರುಸಹಿತ ಕಿತ್ತುಹಾಕಲು ನಾವು ಸಂಕಲ್ಪ ಮಾಡಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಅವರ ದೃಷ್ಟಿಯನ್ನು ಈಡೇರಿಸುವ ನಮ್ಮ ಪ್ರಯತ್ನಗಳನ್ನು ಮತ್ತಷ್ಟು ಹೆಚ್ಚಿಸಲು ನಾನು ಇಂದು ದೆಹಲಿಯಲ್ಲಿ ಎಡಪಂಥೀಯ ಉಗ್ರವಾದದ (LWE) ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ವಹಿಸಲು ಎದುರು ನೋಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ಸಭೆಯಲ್ಲಿ ಬಿಹಾರ, ಒಡಿಶಾ, ಮಹಾರಾಷ್ಟ್ರ, ತೆಲಂಗಾಣ, ಮಧ್ಯಪ್ರದೇಶ, ಜಾರ್ಖಂಡ್, ಆಂಧ್ರಪ್ರದೇಶ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ ಮತ್ತು ಕೇರಳದ ಮುಖ್ಯಮಂತ್ರಿಗಳು, ಗೃಹ ಸಚಿವರು ಅಥವಾ ಅವರ ಪ್ರತಿನಿಧಿಗಳು ಭಾಗವಹಿಸಿದ್ದಾರೆ. ಇವುಗಳು ಎಡಪಂಥೀಯ ಉಗ್ರವಾದದಿಂದ (LWE) ಪ್ರಭಾವಿತವಾಗಿರುವ ರಾಜ್ಯಗಳಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


