ದೇಶ

ಉತ್ತರ ಪ್ರದೇಶ: ಕಾಂಗ್ರೆಸ್‌ಗೆ ಮರಳಿದ ಇಮ್ರಾನ್ ಮಸೂದ್

ಆಗಸ್ಟ್‌ನಲ್ಲಿ ಬಿಎಸ್‌ಪಿಯಿಂದ ಉಚ್ಚಾಟನೆಗೊಂಡಿದ್ದ ಉತ್ತರ ಪ್ರದೇಶದ ಮಾಜಿ ಶಾಸಕ ಇಮ್ರಾನ್ ಮಸೂದ್ ಅವರು ಶನಿವಾರ ಕಾಂಗ್ರೆಸ್‌ಗೆ ಮರಳಿದ್ದು, "ಘರ್ ವಾಪ್ಸಿ" ಎಂದು 'ಕೈ' ಬಣ್ಣಿಸಿದೆ.

ಉತ್ತರ ಪ್ರದೇಶ: ಕಾಂಗ್ರೆಸ್‌ಗೆ ಮರಳಿದ ಇಮ್ರಾನ್ ಮಸೂದ್
ಇಮ್ರಾನ್ ಮಸೂದ್
Published On :

ಲಖನೌ: ಆಗಸ್ಟ್‌ನಲ್ಲಿ ಬಿಎಸ್‌ಪಿಯಿಂದ ಉಚ್ಚಾಟನೆಗೊಂಡಿದ್ದ ಉತ್ತರ ಪ್ರದೇಶದ ಮಾಜಿ ಶಾಸಕ ಇಮ್ರಾನ್ ಮಸೂದ್ ಅವರು ಶನಿವಾರ ಕಾಂಗ್ರೆಸ್‌ಗೆ ಮರಳಿದ್ದು, "ಘರ್ ವಾಪ್ಸಿ" ಎಂದು 'ಕೈ' ಬಣ್ಣಿಸಿದೆ.

ಕಳೆದ ವರ್ಷ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ, ಮಸೂದ್ 2022ರ ಜನವರಿಯಲ್ಲಿ ಸಮಾಜವಾದಿ ಪಕ್ಷಕ್ಕೆ ಸೇರಿದ್ದರು. ಆದರೆ ಚುನಾವಣೆಯ ನಂತರ ಬಿಎಸ್‌ಪಿಗೆ ಹೋಗಿದ್ದರು.

2007ರಲ್ಲಿ ಸಹರಾನ್‌ಪುರ ಜಿಲ್ಲೆಯ ಮುಜಫರಾಬಾದ್‌ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಮಸೂದ್‌ ಅವರು ಈಗ ಮತ್ತೆ ಕಾಂಗ್ರೆಸ್ ಸೇರಿದ್ದು, "ಸಾಯುವವರೆಗೂ" ಕಾಂಗ್ರೆಸ್‌ ತೊರೆಯುವುದಿಲ್ಲ ಎಂದು ತಮ್ಮ ಬೆಂಬಲಿಗರಿಗೆ ಹೇಳಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ನಿರಾಸೆಗೊಳಿಸಿದ್ದಕ್ಕಾಗಿ ಕ್ಷಮೆಯಾಚಿಸುವುದಾಗಿಯೂ ಮಸೂದ್ ಹೇಳಿದ್ದಾರೆ.

ಮಸೂದ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ರಾಜೀವ್ ಶುಕ್ಲಾ, ಇದು ಮಸೂದ್ ಅವರ "ಘರ್ ವಾಪ್ಸಿ"(ಮನೆಗೆ ಮರಳುವುದು) ಎಂದು ಹೇಳಿದರು ಮತ್ತು ಅವರು ಮತ್ತೆ ಪಕ್ಷವನ್ನು ತೊರೆಯುವುದಿಲ್ಲ ಎಂದು ಪ್ರತಿಜ್ಞೆ ಮಾಡಿರುವುದಾಗಿ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.