ಟಿಬೆಟಿಯನ್ ಧರ್ಮ ಗುರು ದಲೈ ಲಾಮಾ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು
ಟಿಬೆಟಿಯನ್ ಬೌದ್ಧ ಧರ್ಮ ಗುರು ದಲೈ ಲಾಮಾ ಅವರು ಭಾನುವಾರ ಸಂಜೆ ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್(ಏಮ್ಸ್)ಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನವದೆಹಲಿ: ಟಿಬೆಟಿಯನ್ ಬೌದ್ಧ ಧರ್ಮ ಗುರು ದಲೈ ಲಾಮಾ ಅವರು ಭಾನುವಾರ ಸಂಜೆ ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್(ಏಮ್ಸ್)ಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದಲೈ ಲಾಮಾ ಅವರನ್ನು ಕಾರ್ಡಿಯಾಲಜಿ ಪ್ರಾಧ್ಯಾಪಕ ಡಾ.ರಾಜೀವ್ ನಾರಂಗ್ ಅವರ ಕಾರ್ಡಿಯೋ-ನ್ಯೂರೋ ಸೆಂಟರ್‌ನ ಖಾಸಗಿ ವಾರ್ಡ್‌ಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ದಲೈಲಾಮಾ ಅವರನ್ನು ಇಂದು ಸಂಜೆ ಏಮ್ಸ್ ಆಸ್ಪತ್ರೆಗೆ ಕರೆತರಲಾಯಿತು ಎಂದು ಮೂಲಗಳು ತಿಳಿಸಿವೆ.
ದಲೈ ಲಾಮಾ ಅವರು ನಿರಂತರ ಶೀತದಿಂದ ಬಳಲುತ್ತಿದ್ದು, ವೈದ್ಯಕೀಯ ತಪಾಸಣೆಗಾಗಿ ದೆಹಲಿಗೆ ತೆರಳುತ್ತಿದ್ದಾರೆ. ಯಾರೂ ಆತಂಕಪಡುವ ಅಗತ್ಯವಿಲ್ಲ ಮತ್ತು ಅವರು ಇನ್ನೆರಡು-ಮೂರು ದಿನಗಳಲ್ಲಿ ಧರ್ಮಶಾಲಾಗೆ ಹಿಂತಿರುಗುತ್ತಾರೆ ಎಂದು ಅವರ ಆಪ್ತ ಕಾರ್ಯದರ್ಶಿ ಚಿಮಿ ರಿಗ್ಜಿನ್ ಅವರು ಇಂದು ಬೆಳಗ್ಗೆ ಧರ್ಮಶಾಲಾದಲ್ಲಿ ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


