ಮೂರು ರಾಜ್ಯಗಳ ಚುನಾವಣೆ: ನಾಲ್ವರು ಕೇಂದ್ರ ಸಚಿವರು, 14 ಸಂಸದರನ್ನು ಕಣಕ್ಕಿಳಿಸಿದ ಬಿಜೆಪಿ
ಕೇಂದ್ರ ಚುನಾವಣಾ ಆಯೋಗ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸುತ್ತಿದ್ದಂತೆ ಬಿಜೆಪಿ ಮೂರು ರಾಜ್ಯಗಳಲ್ಲಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ.

ನವದೆಹಲಿ: ಕೇಂದ್ರ ಚುನಾವಣಾ ಆಯೋಗ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸುತ್ತಿದ್ದಂತೆ ಬಿಜೆಪಿ ಮೂರು ರಾಜ್ಯಗಳಲ್ಲಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ.
ಕೇಂದ್ರದ ಆಡಳಿತರೂಢ ಕೇಸರಿ ಪಕ್ಷ ಒಟ್ಟು ನಾಲ್ವರು ಕೇಂದ್ರ ಸಚಿವರು ಸೇರಿದಂತೆ 18 ಸಂಸದರನ್ನು ವಿಧಾನಸಭೆ ಚುನಾವಣಾ ಕಣಕ್ಕಿಳಿಸಿದೆ. ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ತಲಾ ಏಳು ಮತ್ತು ಛತ್ತೀಸ್ಗಢದಲ್ಲಿ ನಾಲ್ವರು ಸಂಸದರನ್ನು ಕಣಕ್ಕಿಳಿಸಿದೆ.
ಮಧ್ಯ ಪ್ರದೇಶದಲ್ಲಿ ಮೂವರು ಕೇಂದ್ರ ಸಚಿವರು ಸೇರಿದಂತೆ ಒಟ್ಟು ಹದಿನೇಳು ಸಂಸದರು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಅವರಲ್ಲಿ ಹೆಚ್ಚಿನವರು ಕಳೆದ ಚುನಾವಣೆಯಲ್ಲಿ ಬಿಜೆಪಿ ಸೋತಿದ್ದ ತುಲನಾತ್ಮಕವಾಗಿ ಕಷ್ಟಕರವಾದ ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದಾರೆ.
ಬಿಜೆಪಿ ಇಂದು ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ಗಢ ವಿಧಾನಸಭೆ ಚುನಾವಣೆಗೆ ತನ್ನ ಅಭ್ಯರ್ಥಿಗಳ ಹೊಸ ಪಟ್ಟಿಯನ್ನು ಪ್ರಕಟಿಸಿದೆ.
ನವೆಂಬರ್ 17 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಇಂದು ಮತ್ತೆ 57 ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ್ದು, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತಮ್ಮ ಬುಧ್ನಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ಛತ್ತೀಸ್ಗಢ ವಿಧಾನಸಭೆ ಚುನಾವಣೆಗೆ ಬಿಜೆಪಿ 64 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದ್ದು, ಅದರಲ್ಲಿ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಅರುಣ್ ಸಾವೊ ಅವರು ಸ್ಥಾನ ಪಡೆದಿದ್ದಾರೆ.
90 ಸದಸ್ಯ ಬಲದ ಛತ್ತೀಸ್ ಗಢ ವಿಧಾನಸಭೆ ಚುನಾವಣೆಗೆ ಬಿಜೆಪಿ ಇದುವರೆಗೆ 85 ಅಭ್ಯರ್ಥಿಗಳನ್ನು ಘೋಷಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


