ಮನಿ ಲಾಂಡರಿಂಗ್ ಪ್ರಕರಣ: ಎಎಪಿ ಶಾಸಕ ಅಮಾನತುಲ್ಲಾ ಖಾನ್ ಮನೆ, ಕಚೇರಿ ಮೇಲೆ ಇಡಿ ದಾಳಿ
ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಂಗಳವಾರ ದೆಹಲಿಯ ಎಎಪಿ ಶಾಸಕ ಅಮಾನತುಲ್ಲಾ ಖಾನ್ ಅವರ ಮನೆ ಹಾಗೂ ಕಚೇರಿ ಸೇರಿದಂತೆ ಹಲವು ಕಡೆ ದಾಳಿ ನಡೆಸಿದೆ ಎಂದು...

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಂಗಳವಾರ ದೆಹಲಿಯ ಎಎಪಿ ಶಾಸಕ ಅಮಾನತುಲ್ಲಾ ಖಾನ್ ಅವರ ಮನೆ ಹಾಗೂ ಕಚೇರಿ ಸೇರಿದಂತೆ ಹಲವು ಕಡೆ ದಾಳಿ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ದೆಹಲಿ ವಿಧಾನಸಭೆಯಲ್ಲಿ ಓಖ್ಲಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ 49 ವರ್ಷದ ಶಾಸಕ ಅಮಾನತುಲ್ಲಾ ಖಾನ್
ಅವರ ನಿವಾಸ ಹಾಗೂ ಕಚೇರಿಯಲ್ಲಿ ಇಂದು ಬೆಳಗ್ಗೆ 7-7:30 ರ ಸುಮಾರಿಗೆ ಪ್ರಾರಂಭವಾದ ದಾಳಿ 12 ಗಂಟೆಗಳ ನಂತರ ಕೊನೆಗೊಂಡಿದೆ ಎಂದು ಮೂಲಗಳು ತಿಳಿಸಿವೆ.
ಮನಿ ಲಾಂಡರಿಂಗ್ ತಡೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಶೋಧ ಕಾರ್ಯಾಚರಣೆ ಕೈಗೊಳ್ಳಲಾಯಿತು ಮತ್ತು ಶಾಸಕರಿಗೆ ಸೇರಿದ ಮೂರು-ನಾಲ್ಕು ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಸಿಬ್ಬಂದಿ ಮತ್ತು ದೆಹಲಿ ಪೊಲೀಸರು ಖಾನ್ ಅವರ ಓಖ್ಲಾ ಮನೆಯ ಹೊರಗೆ ಭದ್ರತೆ ಒದಗಿಸಿರುವ ದೃಶ್ಯಗಳು ಕಂಡು ಬಂದಿದ್ದು, ಇಡಿ ಅಧಿಕಾರಿಗಳು ಒಳಗಿದ್ದವರನ್ನು ಪ್ರಶ್ನಿಸಿದರು ಮತ್ತು ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಬೆಳವಣಿಗೆಗೆ ಪ್ರತಿಕ್ರಿಯಿಸಿದ ಆಮ್ ಆದ್ಮಿ ಪಕ್ಷ, ಕೇಂದ್ರೀಯ ತನಿಖಾ ಸಂಸ್ಥೆಗಳಾದ ಇಡಿ ಮತ್ತು ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ದಾಖಲಿಸಿರುವ ಶೇಕಡ 95ರಷ್ಟು ಪ್ರಕರಣಗಳು ವಿರೋಧ ಪಕ್ಷದ ನಾಯಕರ ವಿರುದ್ಧವಾಗಿವೆ ಮತ್ತು ಭ್ರಷ್ಟಾಚಾರ ನಿಗ್ರಹ ದಳದ ಪ್ರಕರಣದಲ್ಲಿ ಖಾನ್ ಜಾಮೀನು ಪಡೆದುಕೊಂಡಿದ್ದಾರೆ ಎಂದು ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


