ನ್ಯೂಸ್‌ಕ್ಲಿಕ್ ಪ್ರಕರಣ: ಪುರ್ಕಾಯಸ್ಥ, ಚಕ್ರವರ್ತಿಗೆ 10 ದಿನ ನ್ಯಾಯಾಂಗ ಬಂಧನ
ಚೀನಾ ಪರ ಪ್ರಚಾರಕ್ಕಾಗಿ ದೇಣಿಗೆ ಪಡೆದ ಆರೋಪದ ಮೇಲೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಬಂಧಿತರಾಗಿರುವ ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಮತ್ತು ಮಾನವ...

ನವದೆಹಲಿ: ಚೀನಾ ಪರ ಪ್ರಚಾರಕ್ಕಾಗಿ ದೇಣಿಗೆ ಪಡೆದ ಆರೋಪದ ಮೇಲೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಬಂಧಿತರಾಗಿರುವ ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಮತ್ತು ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರನ್ನು ದೆಹಲಿ ನ್ಯಾಯಾಲಯ ಮಂಗಳವಾರ 10 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಬಂಧಿತ ಇಬ್ಬರು ಆರೋಪಿಗಳನ್ನು ಇಂದು ಮಧ್ಯಾಹ್ನ 2:50 ರ ಸುಮಾರಿಗೆ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಹರ್ದೀಪ್ ಕೌರ್ ಅವರ ಮುಂದೆ ಹಾಜರುಪಡಿಸಲಾಯಿತು.
ಆರೋಪಿಗಳ ವಿಚಾರಣೆ ನಡೆಸಿದ ನ್ಯಾಯಾಧೀಶ ಹರ್ದೀಪ್ ಕೌರ್ ಅವರು ಇಬ್ಬರಿಗೂ 10 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.
ಪುರ್ಕಾಯಸ್ಥ ಮತ್ತು ಚಕ್ರವರ್ತಿ ಅವರನ್ನು ದೆಹಲಿ ಪೊಲೀಸರ ವಿಶೇಷ ಘಟಕ ಕಳೆದ ಮಂಗಳವಾರ ಬಂಧಿಸಿದ್ದು, ದೆಹಲಿಯಲ್ಲಿರುವ ನ್ಯೂಸ್‌ಕ್ಲಿಕ್ ಕಚೇರಿಯನ್ನು ಪೊಲೀಸರು ಸೀಲ್ ಮಾಡಿದ್ದಾರೆ ಮತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಪತ್ರಕರ್ತರನ್ನು ವಿಚಾರಣೆಗೊಳಪಡಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


