ಕೊಚ್ಚಾಡಿಯನ್ ವಂಚನೆ ಪ್ರಕರಣ: ಸುಪ್ರೀಂ ಕೋರ್ಟ್ ನಲ್ಲಿ ರಜನಿಕಾಂತ್ ಪತ್ನಿಗೆ ಹಿನ್ನಡೆ
ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ದೀಪಿಕಾ ಪಡುಕೋಣೆ ಅಭಿನಯದ ಕೊಚ್ಚಾಡಿಯನ್ ಚಿತ್ರಕ್ಕೆ ಸಂಬಂಧಿಸಿದ ವಂಚನೆ ಪ್ರಕರಣದಲ್ಲಿ ಲತಾ ರಜನಿಕಾಂತ್ ಅವರಿಗೆ ಸುಪ್ರೀಂ ಕೋರ್ಟ್ ನಲ್ಲಿ ತೀವ್ರ ಹಿನ್ನಡೆಯಾಗಿದೆ.

ನವದೆಹಲಿ: ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ದೀಪಿಕಾ ಪಡುಕೋಣೆ ಅಭಿನಯದ ಕೊಚ್ಚಾಡಿಯನ್ ಚಿತ್ರಕ್ಕೆ ಸಂಬಂಧಿಸಿದ ವಂಚನೆ ಪ್ರಕರಣದಲ್ಲಿ ಲತಾ ರಜನಿಕಾಂತ್ ಅವರಿಗೆ ಸುಪ್ರೀಂ ಕೋರ್ಟ್ ನಲ್ಲಿ ತೀವ್ರ ಹಿನ್ನಡೆಯಾಗಿದೆ.
ತಮ್ಮ ವಿರುದ್ಧದ ಪ್ರಕರಣ ರದ್ದು ಕೋರಿ ಲತಾ ರಜನಿಕಾಂತ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಎಸ್ ಬೋಪಣ್ಣ ಮತ್ತು ಎಂಎಂ ಸುಂದ್ರೇಶ್ ಅವರ ಪೀಠ, ವಂಚನೆ ಪ್ರಕರಣ ರದ್ದುಗೊಳಿಸಲು ನಿರಾಕರಿಸಿದೆ.
ತಮ್ಮ ವಿರುದ್ಧದ ವಂಚನೆ ಪ್ರಕರಣ ರದ್ದುಗೊಳಿಸುವಂತೆ ಲತಾ ರಜನಿಕಾಂತ್ ಅವರು ಮಾಡಿದ್ದ ಮನವಿಯನ್ನು ನ್ಯಾಯಮೂರ್ತಿಗಳಾದ ಎಎಸ್ ಬೋಪಣ್ಣ ಮತ್ತು ಎಂಎಂ ಸುಂದ್ರೇಶ್ ಅವರ ಪೀಠ ತಿರಸ್ಕರಿಸಿದೆ. ವಿಚಾರಣಾ ನ್ಯಾಯಾಲಯದಲ್ಲಿ ಪ್ರಕರಣ ರದ್ದು ಕೋರುವುದು ಅಥವಾ ವಿಚಾರಣೆ ಎದುರಿಸುವುದು ಲತಾ ರಜನಿಕಾಂತ್‌ಗೆ ಇರುವ ಏಕೈಕ ದಾರಿ ಎಂದು ಹೇಳಿದೆ.
ಲತಾ ರಜನಿಕಾಂತ್ ಅವರ ವಿರುದ್ಧದ ಆರೋಪಗಳನ್ನು ಮೌಲ್ಯಮಾಪನ ಮಾಡದೆ ಅವರ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಖಡಾಖಂಡಿತವಾಗಿ ಹೇಳಿದೆ.
ವಿಚಾರಣಾ ನ್ಯಾಯಾಲಯವು ಪ್ರಕರಣದ ಅರ್ಹತೆ ಮತ್ತು ಕಾನೂನಿನ ಪ್ರಕಾರ ಈ ಪ್ರಕರಣವನ್ನು ಪರಿಗಣಿಸಲು ನಿರ್ದೇಶಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ. ಆದರೆ, ನ್ಯಾಯಾಲಯ ನಿರ್ದೇಶನ ನೀಡದ ಹೊರತು ಲತಾ ರಜನಿಕಾಂತ್ ಅವರು ಬೆಂಗಳೂರಿನ ವಿಚಾರಣಾ ನ್ಯಾಯಾಲಯದ ಮುಂದೆ ಹಾಜರಾಗುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


