ದೇಶ

ಯುದ್ಧ ಪೀಡಿತ ಇಸ್ರೇಲ್‌ನಿಂದ ಭಾರತೀಯರನ್ನು ಕರೆತರಲು 'ಆಪರೇಷನ್ ಅಜಯ್' ಘೋಷಣೆ

ಯುದ್ಧ ಪೀಡಿತ ಇಸ್ರೇಲ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಮರಳಿ ದೇಶಕ್ಕೆ ಕರೆತರಲು ಆಪರೇಷನ್ ಅಜಯ್ ಪ್ರಾರಂಭಿಸುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಬುಧವಾರ ಹೇಳಿದ್ದಾರೆ.

ಯುದ್ಧ ಪೀಡಿತ ಇಸ್ರೇಲ್‌ನಿಂದ ಭಾರತೀಯರನ್ನು ಕರೆತರಲು 'ಆಪರೇಷನ್ ಅಜಯ್' ಘೋಷಣೆ
ವಿದೇಶಾಂಗ ಸಚಿವ ಎಸ್ ಜೈಶಂಕರ್
Published On :

ನವದೆಹಲಿ: ಯುದ್ಧ ಪೀಡಿತ ಇಸ್ರೇಲ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಮರಳಿ ದೇಶಕ್ಕೆ ಕರೆತರಲು ಆಪರೇಷನ್ ಅಜಯ್ ಪ್ರಾರಂಭಿಸುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಬುಧವಾರ ಹೇಳಿದ್ದಾರೆ.

ಇಸ್ರೇಲ್‌ನಿಂದ ಹಿಂದಿರುಗಲು ಬಯಸುವ ಭಾರತದ ನಾಗರಿಕರಿಗೆ  ಅನುಕೂಲವಾಗುವಂತೆ ‘ಆಪರೇಷನ್ ಅಜಯ್’  ಅನ್ನು ಪ್ರಾರಂಭಿಸಲಾಗುತ್ತಿದ್ದು, ವಿಶೇಷ ಚಾರ್ಟರ್ ವಿಮಾನಗಳು ಮತ್ತು ಇನ್ನಿತರ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ ಎಂದು ಜೈಶಂಕರ್ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ವಿದೇಶದಲ್ಲಿರುವ ನಮ್ಮ ಪ್ರಜೆಗಳ ಸುರಕ್ಷತೆ ಮತ್ತು ಯೋಗಕ್ಷೇಮಕ್ಕೆ ಸರ್ಕಾರ ಸಂಪೂರ್ಣವಾಗಿ ಬದ್ಧವಾಗಿದೆ ಎಂದು ಜೈಶಂಕರ್ ಅವರು ತಿಳಿಸಿದ್ದಾರೆ.

ಇಸ್ರೇಲ್​ ಹಾಗೂ ಹಮಾಸ್ ಉಗ್ರಗಾಮಿಗಳ ಯುದ್ಧ ತೀವ್ರ ಸ್ವರೂಪೆ ಪಡೆಯುತ್ತಿರುವ ಹಿನ್ನಲೆಯಲ್ಲಿ ಭಾರತೀಯ ಪ್ರಜೆಗಳ ಸುರಕ್ಷತೆಯ ಬಗ್ಗೆ ಇದೀಗ ಕಳವಳ ವ್ಯಕ್ತಪಡಿಸಲಾಗುತ್ತಿದೆ. ಇಸ್ರೇಲ್‌ನಲ್ಲಿ ನೆಲೆಸಿರುವ 18,000 ಭಾರತೀಯ ಪ್ರಜೆಗಳಲ್ಲಿ ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.