ದೇಶ

ಹಣ ಅಕ್ರಮ ವರ್ಗಾವಣೆ ಪ್ರಕರಣ; ಬಂಧನ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಎಎಪಿ ನಾಯಕ ಸಂಜಯ್ ಸಿಂಗ್

ರದ್ದಾಗಿರುವ ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ತಮ್ಮ ಬಂಧನದ ವಿರುದ್ಧ ಎಎಪಿ ನಾಯಕ ಸಂಜಯ್ ಸಿಂಗ್ ಶುಕ್ರವಾರ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಹಣ ಅಕ್ರಮ ವರ್ಗಾವಣೆ ಪ್ರಕರಣ; ಬಂಧನ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಎಎಪಿ ನಾಯಕ ಸಂಜಯ್ ಸಿಂಗ್
ಎಎಪಿ ನಾಯಕ ಸಂಜಯ್ ಸಿಂಗ್
Published On :

ನವದೆಹಲಿ: ರದ್ದಾಗಿರುವ ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ತಮ್ಮ ಬಂಧನದ ವಿರುದ್ಧ ಎಎಪಿ ನಾಯಕ ಸಂಜಯ್ ಸಿಂಗ್ ಶುಕ್ರವಾರ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ. 

ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಂಜೀವ್ ನರುಲಾ ಅವರ ಪೀಠದ ಮುಂದೆ ಎಎಪಿ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಪರ ವಕೀಲರು ತುರ್ತು ವಿಚಾರಣೆಗಾಗಿ ಮನವಿ ಮಾಡಿದರು.

ಬಂಧನಕ್ಕೆ ಸರಿಯಾದ ಆಧಾರಗಳನ್ನು ಅವರಿಗೆ ಒದಗಿಸಲಾಗಿಲ್ಲ ಎಂದು ಸಿಂಗ್ ಅವರ ಪರ ವಕೀಲರು ಹೇಳಿದರು.

ಇದಕ್ಕೆ ನ್ಯಾಯಾಲಯ 'ಆಲ್‌ರೈಟ್' ಎಂದು ಹೇಳಿದೆ.

ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಜಯ್ ಸಿಂಗ್ ಅವರನ್ನು ಅಕ್ಟೋಬರ್ 4ರಂದು ಬಂಧಿಸಲಾಗಿದೆ. ಈ ಸಂಬಂಧ ವಿಚಾರಣಾ ನ್ಯಾಯಾಲಯವು ಸಿಂಗ್ ಅವರ ಕಸ್ಟಡಿ ಅವಧಿಯನ್ನು ಅಕ್ಟೋಬರ್ 13ರವರೆಗೆ ವಿಸ್ತರಿಸಿದೆ. ಜಾರಿ ನಿರ್ದೇಶನಾಲಯದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಬಿಐ ಕೂಡ ಎಫ್ಐಆರ್ ದಾಖಲಿಸಿದೆ. 

ಸಿಬಿಐ ಮತ್ತು ಇಡಿ ಪ್ರಕಾರ, ದೆಹಲಿ ಅಬಕಾರಿ ನೀತಿ 2021-22 ಅನ್ನು ಮಾರ್ಪಡಿಸುವಾಗ ಅಕ್ರಮಗಳು ನಡೆದಿವೆ ಮತ್ತು ಪರವಾನಗಿ ಹೊಂದಿರುವವರಿಗೆ ಅನಪೇಕ್ಷಿತ ಅನುಕೂಲಗಳನ್ನು ಮಾಡಿಕೊಡಲಾಗಿದೆ.

ದೆಹಲಿ ಸರ್ಕಾರವು ನವೆಂಬರ್ 17, 2021 ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತು. ಆದರೆ, ಭ್ರಷ್ಟಾಚಾರದ ಆರೋಪಗಳ ನಡುವೆ ಸೆಪ್ಟೆಂಬರ್ 2022ರ ಕೊನೆಯಲ್ಲಿ ಅದನ್ನು ರದ್ದುಗೊಳಿಸಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.