ವಿಶ್ವದ ಅತಿ ಎತ್ತರದ ಯುದ್ಧಭೂಮಿಯಲ್ಲಿ ಮೊದಲ ಮೊಬೈಲ್ ಟವರ್ ಸ್ಥಾಪಿಸಿದ ಭಾರತೀಯ ಸೇನೆ!
ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್ ಗ್ಲೇಸಿಯರ್‌ನಲ್ಲಿ ಮೊಟ್ಟಮೊದಲ ಬಾರಿಗೆ ಮೊಬೈಲ್ ಟವರ್ ಅಳವಡಿಸಿರುವುದಾಗಿ ಭಾರತೀಯ ಸೇನೆಯ ಫೈರ್ ಅಂಡ್ ಫ್ಯೂರಿ ಕಾರ್ಪ್ಸ್ ಟ್ವಿಟರ್‌ನಲ್ಲಿ ಹಂಚಿಕೊಂಡಿದೆ.

ನವದೆಹಲಿ: ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್ ಗ್ಲೇಸಿಯರ್‌ನಲ್ಲಿ ಮೊಟ್ಟಮೊದಲ ಬಾರಿಗೆ ಮೊಬೈಲ್ ಟವರ್ ಅಳವಡಿಸಿರುವುದಾಗಿ ಭಾರತೀಯ ಸೇನೆಯ ಫೈರ್ ಅಂಡ್ ಫ್ಯೂರಿ ಕಾರ್ಪ್ಸ್ ಟ್ವಿಟರ್‌ನಲ್ಲಿ ಹಂಚಿಕೊಂಡಿದೆ.
BSNL ಮತ್ತು ಭಾರತೀಯ ಸೇನೆಯು ಜಂಟಿಯಾಗಿ ಈ ಕಾರ್ಯವನ್ನು ನಿರ್ವಹಿಸಿವೆ. ಭಾರತೀಯ ಸೇನೆಯ ಫೈರ್ ಅಂಡ್ ಫ್ಯೂರಿ ಕಾರ್ಪ್ಸ್ ಮೊಬೈಲ್ ಟವರ್‌ನ ಕೆಲವು ಚಿತ್ರಗಳೊಂದಿಗೆ ಎಕ್ಸ್ ನಲ್ಲಿ ಹಂಚಿಕೊಂಡಿದೆ.
ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಎಸ್‌ಎನ್‌ಎಲ್, ವಿಶ್ವದ ಅತಿ ಎತ್ತರದ ಯುದ್ಧಭೂಮಿಯಾದ ಸಿಯಾಚಿನ್ ಗ್ಲೇಸಿಯರ್‌ನಲ್ಲಿ ಮೊಟ್ಟಮೊದಲ BTS ಅನ್ನು ಘೋಷಿಸಲು ನಾವು ಹೆಮ್ಮೆಪಡುತ್ತೇವೆ. 15,500 ಅಡಿಗಳಿಗಿಂತ ಹೆಚ್ಚು ಎತ್ತರದಲ್ಲಿ ನಿಯೋಜಿಸಲಾದ ನಮ್ಮ ವೀರ ಸೈನಿಕರಿಗೆ ಇದು ಅತ್ಯಗತ್ಯ ಮೊಬೈಲ್ ಸಂವಹನವಾಗಿದೆ. ಸಿಯಾಚಿನ್‌ನ ಕನಿಷ್ಠ ತಾಪಮಾನದಲ್ಲಿ ಕರ್ತವ್ಯ ನಿರ್ವಹಿಸುವ ಮತ್ತು ತಿಂಗಳುಗಟ್ಟಲೆ ತಮ್ಮ ಕುಟುಂಬಗಳೊಂದಿಗೆ ಮಾತನಾಡಲು ಸಾಧ್ಯವಾಗದ ಸೈನಿಕರಿಗೆ ಇದು ಪ್ರಯೋಜನವನ್ನು ನೀಡುತ್ತದೆ ಎಂದು ಬರೆದುಕೊಂಡಿದೆ.
ಆನಂದ್ ಮಹೀಂದ್ರಾ ಸಿಯಾಚಿನ್‌ನಲ್ಲಿ ಬಿಎಸ್‌ಎನ್‌ಎಲ್ ಟವರ್ ಸ್ಥಾಪನೆಯನ್ನು ದೊಡ್ಡ ಸುದ್ದಿ ಎಂದು ಬಣ್ಣಿಸಿದ್ದಾರೆ. ಅವರು ಸಾಮಾಜಿಕ ಮಾಧ್ಯಮ ವೇದಿಕೆ X ನಲ್ಲಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಸಿಯಾಚಿನ್‌ನಲ್ಲಿ ಅಳವಡಿಸಲಾಗಿರುವ ಮೊಬೈಲ್ ಟವರ್‌ನ ಈ ಚಿತ್ರಗಳನ್ನು ದೇವುಸಿಂಗ್ ಹಂಚಿಕೊಂಡಿದ್ದಾರೆ. ಇದು ಜಗತ್ತಿಗೆ ಒಂದು ಸಣ್ಣ ಘಟನೆ, ಆದರೆ ಅತ್ಯಂತ ಎತ್ತರದ ಯುದ್ಧಭೂಮಿಯಲ್ಲಿ ಪ್ರತಿದಿನ ತಮ್ಮ ಪ್ರಾಣವನ್ನು ಪಣಕ್ಕಿಡುವ ಸೈನಿಕರಿಗೆ ಇದು ವಿಕ್ರಮ್ ಲ್ಯಾಂಡರ್‌ನಷ್ಟೇ ಮುಖ್ಯವಾಗಿದೆ. ಅವರು ಈಗ ತಮ್ಮ ಕುಟುಂಬಗಳೊಂದಿಗೆ ಸಂಪರ್ಕದಲ್ಲಿರುತ್ತಾರೆ. ಇದು ನನಗೆ ಬಹಳ ದೊಡ್ಡ ಸುದ್ದಿ ಎಂದು ಬರೆದುಕೊಂಡಿದ್ದಾರೆ.
ಕೇಂದ್ರ ಸಂಪರ್ಕ ಖಾತೆ ರಾಜ್ಯ ಸಚಿವ ದೇವುಸಿಂಗ್ ಚೌಹಾಣ್ ಬಿಎಸ್‌ಎನ್‌ಎಲ್ ಮತ್ತು ಸಿಯಾಚಿನ್ ವಾರಿಯರ್ಸ್‌ಗೆ ಅಭಿನಂದನೆ ಸಲ್ಲಿಸಿದರು. ಈಗ ನಮ್ಮ ನಾಯಕರು ತಮ್ಮ ಪ್ರೀತಿಪಾತ್ರರೊಂದಿಗೆ ಅವರ ಅನುಕೂಲಕ್ಕೆ ತಕ್ಕಂತೆ ಮಾತನಾಡಬಹುದು ಎಂದು ಬರೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


