ಭಾರತೀಯರನ್ನು ಕರೆತರಲು ಯುದ್ಧ ಗ್ರಸ್ಥ ಇಸ್ರೇಲ್ ಗೆ ಏರ್ ಇಂಡಿಯಾ, ಸ್ಪೈಸ್‌ಜೆಟ್ ಹಾರಾಟ!
ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದಿಂದಾಗಿ ಇಸ್ರೇಲ್ ನಲ್ಲಿ ಸಿಲುಕಿರುವ ಭಾರತೀಯರನ್ನು ಮರಳಿ ಕರೆತರಲು ಏರ್ ಇಂಡಿಯಾ ಮತ್ತು ಸ್ಪೈಸ್ ಜೆಟ್ ನ ತಲಾ ಒಂದು ವಿಮಾನವನ್ನು ಟೆಲ್ ಅವೀವ್‌ಗೆ ಹಾರಾಟ ನಡೆಸಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನವದೆಹಲಿ: ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದಿಂದಾಗಿ ಇಸ್ರೇಲ್ ನಲ್ಲಿ ಸಿಲುಕಿರುವ ಭಾರತೀಯರನ್ನು ಮರಳಿ ಕರೆತರಲು ಏರ್ ಇಂಡಿಯಾ ಮತ್ತು ಸ್ಪೈಸ್ ಜೆಟ್ ನ ತಲಾ ಒಂದು ವಿಮಾನವನ್ನು ಟೆಲ್ ಅವೀವ್‌ಗೆ ಹಾರಾಟ ನಡೆಸಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆಪರೇಷನ್ ಅಜಯ್ ಅಡಿಯಲ್ಲಿ ಈ ಚಾರ್ಟರ್ಡ್ ಫ್ಲೈಟ್‌ಗಳನ್ನು ನಿರ್ವಹಿಸಲಾಗುವುದು. ಇದು ಇಸ್ರೇಲ್‌ನಿಂದ ಭಾರತಕ್ಕೆ ಹಿಂತಿರುಗಲು ಬಯಸುವವರಿಗೆ ಅನುಕೂಲವಾಗಲಿ ಎಂದು ಸರ್ಕಾರ ಆಪರೇಷನ್ ಅಜಯ್ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ.
ಏರ್ ಇಂಡಿಯಾ ನವದೆಹಲಿಯಿಂದ ಟೆಲ್ ಅವೀವ್‌ಗೆ ಹಾರಾಟ ನಡೆಸಲಿದೆ. ಇನ್ನು ಸ್ಪೈಸ್‌ಜೆಟ್ ಅಮೃತಸರದಿಂದ ಟೆಲ್ ಅವೀವ್‌ಗೆ ಹಾರಾಟ ನಡೆಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎರಡೂ ವಿಮಾನಗಳು ಭಾನುವಾರ ಬೆಳಿಗ್ಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ಇಳಿಯುವ ನಿರೀಕ್ಷೆಯಿದೆ. ಏರ್ ಇಂಡಿಯಾ ಭಾನುವಾರ ಟೆಲ್ ಅವೀವ್‌ಗೆ ಮತ್ತೊಂದು ವಿಮಾನವನ್ನು ಕಳುಹಿಸಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


