ವಿಶ್ವಕಪ್ ಟೂರ್ನಿ: ಪಾಕ್ ವಿರುದ್ಧ ಐತಿಹಾಸಿಕ ಗೆಲುವು: ಟೀಂ ಇಂಡಿಯಾಗೆ ಪ್ರಧಾನಿ ಮೋದಿ ಅಭಿನಂದನೆ
ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನದ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಭಾರತ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ನವದೆಹಲಿ: ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನದ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಭಾರತ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಐತಿಹಾಸಿಕ ಗೆಲುವು ಸಾಧಿಸಿರುವ ಟೀಂ ಇಂಡಿಯಾಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಒಡಿಐ ವಿಶ್ವಕಪ್ ಟೂರ್ನಿ ಇತಿಹಾಸದಲ್ಲಿ ಪಾಕ್ ವಿರುದ್ಧದ ಪ್ರಾಬಲ್ಯವನ್ನು ಭಾರತ ಈ ಗೆಲುವಿನ ಮೂಲಕ ಮುಂದುವರೆಸಿದೆ.
ಇದು ಪಾಕ್ ವಿರುದ್ಧ ಭಾರತಕ್ಕೆ ವಿಶ್ವಕಪ್ ಟೂರ್ನಿಯಲ್ಲಿ 8 ನೇ ಗೆಲುವಾಗಿದೆ. ಅಹಮದಾಬಾದ್‌ನಲ್ಲಿ ಪಾಕಿಸ್ತಾನದ ಮೇಲೆ ಭಾರತದ ಬೌಲರ್‌ಗಳು ಪ್ರಾಬಲ್ಯ ಮೆರೆದರು. ಜಸ್ಪ್ರೀತ್ ಬುಮ್ರಾ 7 ಓವರ್‌ಗಳಲ್ಲಿ 19 ರನ್ ನೀಡಿ 2 ವಿಕೆಟ್ ಪಡೆದರು. ಅವರು ಮೇಡನ್ ಓವರ್ ಬೌಲ್ ಮಾಡಿದರು. ಮೊಹಮ್ಮದ್ ಸಿರಾಜ್ 8 ಓವರ್ ಗಳಲ್ಲಿ 50 ರನ್ ನೀಡಿ 2 ವಿಕೆಟ್ ಪಡೆದರು.
ಇದನ್ನೂ ಓದಿ: ಏಕದಿನ ವಿಶ್ವಕಪ್ 2023: ಭಾರತೀಯ ಬೌಲರ್ಗಳ ಮಾರಕ ದಾಳಿ; ಪಾಕ್ ವಿರುದ್ಧ ಭಾರತಕ್ಕೆ 7 ವಿಕೆಟ್ ಗಳ ಭರ್ಜರಿ ಜಯ!
ಹಾರ್ದಿಕ್ ಪಾಂಡ್ಯ 6 ಓವರ್ ಗಳಲ್ಲಿ 34 ರನ್ ನೀಡಿ 2 ವಿಕೆಟ್ ಪಡೆದರು. ಕುಲದೀಪ್ ಯಾದವ್ 10 ಓವರ್ ಗಳಲ್ಲಿ 35 ರನ್ ನೀಡಿ 2 ವಿಕೆಟ್ ಪಡೆದರು. ರವೀಂದ್ರ ಜಡೇಜಾ 9.5 ಓವರ್ ಗಳಲ್ಲಿ 38 ರನ್ ನೀಡಿ 2 ವಿಕೆಟ್ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


