ಆಂಧ್ರಪ್ರದೇಶ: ಜೈಲಿನಲ್ಲಿ ಚಂದ್ರಬಾಬು ನಾಯ್ಡುಗೆ ಹವಾನಿಯಂತ್ರಣ ಸೌಲಭ್ಯ ಕಲ್ಪಿಸಲು ಕೋರ್ಟ್ ಅನುಮತಿ
ಕೌಶಲ್ಯಾಭಿವೃದ್ಧಿ ನಿಗಮ ಹಗರಣ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ರಾಜಮಹೇಂದ್ರವರಂ ಕೇಂದ್ರ ಕಾರಾಗೃಹದಲ್ಲಿರುವ ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರಿಗೆ ಹವಾನಿಯಂತ್ರಣ ಸೌಲಭ್ಯ ಕಲ್ಪಿಸಲು ಅಮರಾವತಿಯ ಸ್ಥಳೀಯ ನ್ಯಾಯಾಲಯ ಶನಿವಾರ ಅನುಮತಿ ನೀಡಿದೆ.

ಅಮರಾವತಿ: ಕೌಶಲ್ಯಾಭಿವೃದ್ಧಿ ನಿಗಮ ಹಗರಣ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ರಾಜಮಹೇಂದ್ರವರಂ ಕೇಂದ್ರ ಕಾರಾಗೃಹದಲ್ಲಿರುವ ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರಿಗೆ ಹವಾನಿಯಂತ್ರಣ ಸೌಲಭ್ಯ ಕಲ್ಪಿಸಲು ಅಮರಾವತಿಯ ಸ್ಥಳೀಯ ನ್ಯಾಯಾಲಯ ಶನಿವಾರ ಅನುಮತಿ ನೀಡಿದೆ. ಈ ಸಂಬಂಧ ನಾಯ್ಡು ಪರ ವಕೀಲರ ತಂಡವು ಶನಿವಾರ ವಿಜಯವಾಡ ಎಸಿಬಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿತ್ತು.
"ರಾಜಮಹೇಂದ್ರವರಂನ ಸರ್ಕಾರಿ ಜನರಲ್ ಆಸ್ಪತ್ರೆಯ ವೈದ್ಯರ ತಂಡದ ವರದಿಯನ್ನು ಗಮನದಲ್ಲಿಟ್ಟುಕೊಂಡು, ಅರ್ಜಿದಾರರ ಚರ್ಮದ ಸಮಸ್ಯೆ ತಡೆಯಲು ಅವರ ಕೋಣೆಯಲ್ಲಿ ಹವಾನಿಯಂತ್ರಣವನ್ನು ಶೀಘ್ರವಾಗಿ ಒದಗಿಸುವುದು ಅತ್ಯಂತ ಅವಶ್ಯಕವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಪರ ವಕೀಲರು ಅರ್ಜಿ ಸಲ್ಲಿಸಿದ್ದರು.
ಶನಿವಾರ ರಾಜಮಹೇಂದ್ರವರಂ ಕೇಂದ್ರ ಕಾರಾಗೃಹದಲ್ಲಿ ನಾಯ್ಡು ಅವರನ್ನು ಪರೀಕ್ಷಿಸಿದ ವೈದ್ಯರ ತಂಡವು ಅವರ ಆರೋಗ್ಯ ಸ್ಥಿರವಾಗಿದೆ ಮತ್ತು ಆಸ್ಪತ್ರೆಗೆ ಸ್ಥಳಾಂತರಿಸುವ ಅಗತ್ಯವಿಲ್ಲ ಆದರೆ, ಹವಾನಿಯಂತ್ರಿತ ಸೌಲಭ್ಯದ ಅಗ್ಯವಿದೆ ಎಂದು ಹೇಳಿದ್ದರು. ಬಂಧನಕ್ಕೊಳಗಾದ ಒಂದು ತಿಂಗಳ ನಂತರ, ನ್ಯಾಯಾಲಯವು ನಾಯ್ಡುಗೆ ಹವಾನಿಯಂತ್ರಣ ಸೌಲಭ್ಯವನ್ನು ಅನುಮತಿಸಿದೆ. ನಾಯ್ಡು ಅವರು ರಾಜಮಹೇಂದ್ರವರಂ ಸೆಂಟ್ರಲ್‌ನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


