ತಿರುವಣ್ಣಾಮಲೈ: ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರು, ಲಾರಿ ನಡುವೆ ಡಿಕ್ಕಿ, 8 ಮಂದಿ ದುರ್ಮರಣ
ತಮಿಳುನಾಡಿನ ತಿರುವಣ್ಣಾಮಲೈನ ಚೆಂಗಂ ಬಳಿಯ ಅಂತನೂರ್ ಬೈಪಾಸ್ ರಸ್ತೆಯಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ.

ತಿರುವಣ್ಣಾಮಲೈ: ತಮಿಳುನಾಡಿನ ತಿರುವಣ್ಣಾಮಲೈನ ಚೆಂಗಂ ಬಳಿಯ ಅಂತನೂರ್ ಬೈಪಾಸ್ ರಸ್ತೆಯಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ.
ತಿರುವಣ್ಣಾಮಲೈನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರು, ಎದುರುಗಡೆಯಿಂದ ಬಂದ ಲಾರಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಘಟನೆಯ ನಂತರ, ಪೊಲೀಸರು ಮತ್ತು ಅಗ್ನಿಶಾಮಕ ದಳಗಳು ಸ್ಥಳಕ್ಕೆ ಆಗಮಿಸಿ ಕಾರಿನಲ್ಲಿ ಸಿಲುಕಿಕೊಂಡಿದ್ದ ಏಳು ಮೃತದೇಹಗಳನ್ನು ಹೊರತೆಗೆದೆದಿದ್ದಾರೆ.
ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆಯೊಬ್ಬರನ್ನು ತಿರುವಣ್ಣಾಮಲೈ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಕೂಡಾ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರಲ್ಲಿ ನಾಲ್ವರು ಪುರುಷರು, ಇಬ್ಬರು ಮಕ್ಕಳು ಮತ್ತು ಇಬ್ಬರು ಮಹಿಳೆಯರು ಸೇರಿದ್ದಾರೆ ಎಂದು ವರದಿಯಾಗಿದೆ.
ಅಪಘಾತದ ನಂತರ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸಂತ್ರಸ್ತರನ್ನು ಗುರುತಿಸುವ ಉದ್ದೇಶದಿಂದ ಚೆಂಗಮ್ ಪೊಲೀಸ್ ಅಧಿಕಾರಿಗಳು ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


