ದೇಶ

ಛತ್ತೀಸಗಢದಲ್ಲಿ ಎನ್‌ಕೌಂಟರ್‌: ಓರ್ವ ನಕ್ಸಲ್ ಹತ, ಎಕೆ-47 ರೈಫಲ್ ವಶಕ್ಕೆ

ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರಾತಾ ಪಡೆಗಳು ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಭದ್ರತಾ ಪಡೆಗಳು ಓರ್ವ ನಕ್ಸಲ್ ಹತನಾಗಿದ್ದಾನೆಂದು ತಿಳಿದುಬಂದಿದೆ.

ಛತ್ತೀಸಗಢದಲ್ಲಿ ಎನ್‌ಕೌಂಟರ್‌: ಓರ್ವ ನಕ್ಸಲ್ ಹತ, ಎಕೆ-47 ರೈಫಲ್ ವಶಕ್ಕೆ
ಸಂಗ್ರಹ ಚಿತ್ರ
Published On :

ಬಿಜಾಪುರ: ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರಾತಾ ಪಡೆಗಳು ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಭದ್ರತಾ ಪಡೆಗಳು ಓರ್ವ ನಕ್ಸಲ್ ಹತನಾಗಿದ್ದಾನೆಂದು ತಿಳಿದುಬಂದಿದೆ.

ಮಡ್ಡೆದ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿರುವ ಬಂದೆಪರಾ ಗ್ರಾಮದ ಸಮೀಫದ ಅರಣ್ಯ ಪ್ರದೇಶದಲ್ಲಿ ಇಂದು ಬೆಳಿಗ್ಗೆ ವಿವಿಧ ಭದ್ರತಾ ಪಡೆಗಳು ಜಂಟಿಯಾಗಿ ನಕ್ಸಲ್‌ ವಿರೋಧಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದವು. ಆ ವೇಳೆ ಗುಂಡಿನ ಚಕಮಕಿ ನಡೆದಿದೆ ಎಂದು ಬಸ್ತಾರ್ ವಲಯದ ಐಜಿಪಿ ಸುಂದರ್‌ರಾಜ್‌ ಪಿ. ಹೇಳಿದ್ದಾರೆ.

ಜಿಲ್ಲಾ ಮೀಸಲು ಪಡೆ, ಬಸ್ತಾರ್‌ ಫೈಟರ್‌, ಪೊಲೀಸರು, ವಿಶೇಷ ಕಾರ್ಯಪಡೆ ಹಾಗೂ ಕೇಂದ್ರೀಯ ಮೀಸಲು ಪೊಲೀಸ್‌ ಪಡೆ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದವು.

ಹತ್ಯೆಯಾದವನ ಗುರುತು ಇನ್ನೂ ಪತ್ತೆಯಾಗಿಲ್ಲ. ಎಕೆ-47 ರೈಫಲ್ ವಶಪಡಿಸಿಕೊಳ್ಳಲಾಗಿದ್ದು, ಕಾರ್ಯಾಚರಣೆ ಮುಂದುವರಿದಿದೆ ಎಂದೂ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.