ದೇಶ

ಮಿಜೋರಾಂ ವಿಧಾನಸಭೆ ಚುನಾವಣೆ: ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದ ಬಿಜೆಪಿ

ಮಿಜೋರಾಂನ 40 ಸ್ಥಾನಗಳ ವಿಧಾನಸಭೆಗೆ ನವೆಂಬರ್‌ 7ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಿಜೋರಾಂ ವಿಧಾನಸಭೆ ಚುನಾವಣೆಗೆ ಬಿಜೆಪಿಯು 13 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿದೆ

ಮಿಜೋರಾಂ ವಿಧಾನಸಭೆ ಚುನಾವಣೆ: ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದ ಬಿಜೆಪಿ
ಸಾಂದರ್ಭಿಕ ಚಿತ್ರ
Published On :

ಐಜ್ವಾಲ್‌: ಮಿಜೋರಾಂನ 40 ಸ್ಥಾನಗಳ ವಿಧಾನಸಭೆಗೆ ನವೆಂಬರ್‌ 7ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ.  ಈ ಹಿನ್ನೆಲೆಯಲ್ಲಿ ಮಿಜೋರಾಂ ವಿಧಾನಸಭೆ ಚುನಾವಣೆಗೆ ಬಿಜೆಪಿಯು 13 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿದೆ.

ದಂಪ, ಹಚ್ಚೆಕ್‌, ಪಲಕ್‌, ಥೊರಂಗ್‌ನಲ್ಲಿ  ಎಂಎನ್‌ಎಫ್ ಪ್ರಾಬಲ್ಯ ಹೊಂದಿದೆ. ಈ ಕ್ಷೇತ್ರಗಳಿಗೂ ಬಿಜೆಪಿ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿದೆ. ಸದ್ಯ ಮಿಜೋರಾಂನಲ್ಲಿ ಎಂಎನ್‌ಎಫ್‌ ಅಧಿಕಾರದಲ್ಲಿದೆ. ಈ ಚುನಾವಣೆಯಲ್ಲಿ ಎಂಎನ್‌ಎಫ್‌ಗೆ ಕಾಂಗ್ರೆಸ್‌, ಬಿಜೆಪಿ ಪ್ರಬಲ ಪೈಪೋಟಿ ನೀಡಲಿವೆ ಎನ್ನಲಾಗಿದೆ.

ಡಿಸೆಂಬರ್‌ 3ರಂದು ಮತ ಎಣಿಕೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ಮುಖ್ಯಸ್ಥ ಜೆಪಿ ನಡ್ಡಾ ಅವರನ್ನು ಒಳಗೊಂಡ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯು ಮಿಜೋರಾಂ ಮತ್ತು ಛತ್ತೀಸ್‌ಗಢ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಹೆಸರನ್ನು ಅನುಮೋದಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.