ದೇಶ

ಸಿಎಂ ಸ್ಥಾನ ಬಿಡಲು ನಾನು ಬಯಸಿದರೂ ಅದು ನನ್ನನ್ನು ಬಿಡುತ್ತಿಲ್ಲ: ಅಶೋಕ್ ಗೆಹ್ಲೋಟ್

ಮುಖ್ಯಮಂತ್ರಿ ಹುದ್ದೆಯನ್ನು ನಾನು ಬಿಡಲು ಬಯಸಿದರೂ ಸಿಎಂ ಸ್ಥಾನ ನನ್ನನ್ನು ಬಿಡುತ್ತಿಲ್ಲ, ಬಹುಶಃ ಬಿಡುವುದು ಇಲ್ಲ ಎಂದು ರಾಜಸ್ತಾನ ಸಿಎಂ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ಸಿಎಂ ಸ್ಥಾನ ಬಿಡಲು ನಾನು ಬಯಸಿದರೂ ಅದು ನನ್ನನ್ನು ಬಿಡುತ್ತಿಲ್ಲ: ಅಶೋಕ್ ಗೆಹ್ಲೋಟ್
Ashok gehlot
Published On :

ನವದೆಹಲಿ: ಮುಖ್ಯಮಂತ್ರಿ ಹುದ್ದೆಯನ್ನು ನಾನು ಬಿಡಲು ಬಯಸಿದರೂ ಸಿಎಂ ಸ್ಥಾನ ನನ್ನನ್ನು ಬಿಡುತ್ತಿಲ್ಲ, ಬಹುಶಃ ಬಿಡುವುದು ಇಲ್ಲ ಎಂದು ರಾಜಸ್ತಾನ ಸಿಎಂ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ಆದರೆ ಮೂರು ಬಾರಿ ನನ್ನನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕಾದರೆ, ಹೈ ಕಮಾಂಡ್ ಗೆ ನನ್ನಲ್ಲಿ ಏನೋ ವಿಶೇಷತೆ ಕಂಡಿರಬೇಕು ಎಂದಿದ್ದಾರೆ. ಹೀಗಿದ್ದರೂ  ಪಕ್ಷ ತೆಗೆದುಕೊಳ್ಳುವು ಯಾವುದೇ ನಿರ್ಧಾರವು ಎಲ್ಲರಿಗೂ ಸ್ವೀಕಾರಾರ್ಹವಾಗಿರುತ್ತದೆ ಎಂದು ಅವರು ಹೇಳಿದರು. 2020 ರಲ್ಲಿ ಅಶೋಕ್ ಗೆಹ್ಲೋಟ್ ವಿರುದ್ಧ ಸಚಿನ್ ಪೈಲಟ್ ಬಂಡಾಯ ಎದ್ದಿದ್ದರು, ಅದನ್ನು ಕ್ಷಮಿಸಿ ಮರೆತುಬಿಡಿ ಎಂಬ ನೀತಿಯನ್ನು ಅಶೋಕೆ ಗೆಹ್ಲೆಟ್ ಅಳವಡಿಸಿಕೊಂಡಿದ್ದಾರೆ.

ಮುಖ್ಯಮಂತ್ರಿ ಹುದ್ದೆಗೆ ಸಂಬಂಧಿಸಿದಂತೆ ಸಚಿನ್‌ ಪೈಲಟ್‌ ಹಾಗೂ ಅಶೋಕ್‌ ಗೆಹ್ಲೋಟ್‌ ನಡುವೆ ಮುಸುಕಿನ ಗುದ್ದಾಟ ನಡೆದಿತ್ತು. ಈ ಜಗಳವು ಬಹುತೇಕ ರಾಜಸ್ಥಾನ ಸರ್ಕಾರವನ್ನು ಉರುಳಿಸುವ ಹಂತಕ್ಕೆ ತಲುಪಿತ್ತಾದರೂ ಹೈಕಮಾಂಡ್‌ ಮಧ್ಯಸ್ಥಿಕೆಯಿಂದ ಸರ್ಕಾರ ಉಳಿದುಕೊಂಡಿತ್ತು.

ಪ್ರತಿಪಕ್ಷ ನಾಯಕರ ವಿರುದ್ಧ ಜಾರಿ ನಿರ್ದೇಶನಾಲಯ ಮತ್ತು ಆದಾಯ ತೆರಿಗೆ ಇಲಾಖೆ ನಡೆಸಿದ ದಾಳಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಅವರು, ಮಾದರಿ ಸಂಹಿತೆ ಜಾರಿಯಲ್ಲಿರುವುದರಿಂದ ತಕ್ಷಣವೇ ತಡೆಯಲು ಪ್ರಧಾನಿ ಮಧ್ಯಸ್ಥಿಕೆ ವಹಿಸಬೇಕು ಎಂದು ಕೋರಿದ್ದಾರೆ. ಚುನಾವಣಾ ಆಯೋಗವೂ ಮಧ್ಯ ಪ್ರವೇಶಿಸಬೇಕು ಎಂದು ಒತ್ತಾಯಿಸಿದರು.

ಟಿಕೆಟ್ ನೀಡುವ ವಿಚಾರದಲ್ಲಿ ಪಕ್ಷದೊಳಗೆ ಭಿನ್ನಾಭಿಪ್ರಾಯಗಳಿವೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಮತ್ತು ಸರ್ವಾನುಮತದಿಂದ ಎಲ್ಲಾ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು. ನವೆಂಬರ್ 25 ರಂದು ರಾಜಸ್ಥಾನ ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.