ದೇಶ

ತಮಿಳುನಾಡು: ಮೂರು ಜಿಲ್ಲೆಗಳಲ್ಲಿ ಆರ್‌ಎಸ್‌ಎಸ್ ರ‍್ಯಾಲಿಗೆ ಅನುಮತಿ ನಿರಾಕರಿಸಿದ ಹೈಕೋರ್ಟ್

ತಮಿಳುನಾಡಿನ ಮಧುರೈ, ರಾಮನಾಥಪುರಂ ಮತ್ತು ಶಿವಗಂಗೈ ಜಿಲ್ಲೆಗಳಲ್ಲಿ ಇದೇ 22 ರಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ರ‍್ಯಾಲಿ ನಡೆಸಲು ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠ ಅನುಮತಿ ನಿರಾಕರಿಸಿದೆ.

ತಮಿಳುನಾಡು: ಮೂರು ಜಿಲ್ಲೆಗಳಲ್ಲಿ ಆರ್‌ಎಸ್‌ಎಸ್ ರ‍್ಯಾಲಿಗೆ ಅನುಮತಿ ನಿರಾಕರಿಸಿದ ಹೈಕೋರ್ಟ್
ಸಾಂದರ್ಭಿಕ ಚಿತ್ರ
Published On :

ಚೆನ್ನೈ: ತಮಿಳುನಾಡಿನ ಮಧುರೈ, ರಾಮನಾಥಪುರಂ ಮತ್ತು ಶಿವಗಂಗೈ ಜಿಲ್ಲೆಗಳಲ್ಲಿ ಇದೇ  22 ರಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ರ‍್ಯಾಲಿ ನಡೆಸಲು ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠ ಅನುಮತಿ ನಿರಾಕರಿಸಿದೆ.

ಆದಾಗ್ಯೂ, ಅಕ್ಟೋಬರ್ 22 ರಂದು 11 ಜಿಲ್ಲೆಗಳಲ್ಲಿ ಮೆರವಣಿಗೆ ನಡೆಸಲು ಆರ್‌ಎಸ್‌ಎಸ್‌ಗೆ ಅನುಮತಿ ನೀಡಿದೆ. ಮಧುರೈ ಸೇರಿದಂತೆ ದಕ್ಷಿಣದ 14 ಜಿಲ್ಲೆಗಳ 20 ಸ್ಥಳಗಳಲ್ಲಿ 22 ರಿಂದ 29ರವರೆಗೂ ಆರ್‌ಎಸ್‌ಎಸ್  ರ‍್ಯಾಲಿ ನಡೆಸಲು ಅನುಮತಿ ನೀಡುವಂತೆ ಕೋರಿ ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದಲ್ಲಿ ಅರ್ಜಿ ಸಲ್ಲಿಸಲಾಗಿತ್ತು.

ಮಧುರೈ, ತಂಜಾವೂರು, ತಿರುಚ್ಚಿ, ದಿಂಡಿಗಲ್, ತೇಣಿ, ಪುದುಕೊಟ್ಟೈ, ಕರೂರ್, ತಿರುನಲ್ವೇಲಿ, ತೂತುಕುಡಿ, ತೆಂಕಶಿ, ವಿರುಧುನಗರ, ಶಿವಗಂಗೈ, ರಾಮನಾಥಪುರಂ, ಕನ್ಯಾಕುಮಾರಿ ಸೇರಿದಂತೆ 14 ಜಿಲ್ಲೆಗಳಲ್ಲಿ ರ‍್ಯಾಲಿ ನಡೆಸಲು ಅನುಮತಿ ನೀಡುವಂತೆ ಮನವಿಯಲ್ಲಿ ಕೋರಲಾಗಿತ್ತು. ಆದಾಗ್ಯೂ, 11 ಜಿಲ್ಲೆಗಳಲ್ಲಿ ಮೆರವಣಿಗೆ ನಡೆಸಲು ಅನುಮತಿ ನೀಡಲಾಗಿದ್ದು, ಮೂರು ಜಿಲ್ಲೆಗಳಲ್ಲಿ ಅನುಮತಿ ನಿರಾಕರಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.