ಕುಟುಂಬದಿಂದಲೇ ಬೆದರಿಕೆ; ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಆರೋಪ, ದೂರು ದಾಖಲು
ಉತ್ತರ ಪ್ರದೇಶದ 2017ರ ಉನ್ನಾವೋ ಅತ್ಯಾಚಾರ ಸಂತ್ರಸ್ತೆ ತನ್ನ ಸಂಬಂಧಿಕರ ವಿರುದ್ಧವೇ ದೂರು ದಾಖಲಿಸಿದ್ದಾರೆ. ಅವರು ಸರ್ಕಾರ ಮತ್ತು ಎನ್‌ಜಿಒಗಳಿಂದ ಪಡೆದ ಹಣವನ್ನು ಕಿತ್ತುಕೊಂಡು ತನ್ನನ್ನು ಮನೆಯಿಂದ ಹೊರಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಉನ್ನಾವೋ: ಉತ್ತರ ಪ್ರದೇಶದ 2017ರ ಉನ್ನಾವೋ ಅತ್ಯಾಚಾರ ಸಂತ್ರಸ್ತೆ ತನ್ನ ಸಂಬಂಧಿಕರ ವಿರುದ್ಧವೇ ದೂರು ದಾಖಲಿಸಿದ್ದಾರೆ. ಅವರು ಸರ್ಕಾರ ಮತ್ತು ಎನ್‌ಜಿಒಗಳಿಂದ ಪಡೆದ ಹಣವನ್ನು ಕಿತ್ತುಕೊಂಡು ತನ್ನನ್ನು ಮನೆಯಿಂದ ಹೊರಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.
2019ರಲ್ಲಿ ಅಂದಿನ ಬಿಜೆಪಿ ಶಾಸಕ ಕುಲದೀಪ್ ಸೆಂಗಾರ್ ಈ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.
ಮಹಿಳೆ ದೂರಿನ ಮೇರೆಗೆ ಮಾಖಿ ಪೊಲೀಸ್ ಠಾಣೆಯಲ್ಲಿ ಆಕೆಯ ಚಿಕ್ಕಪ್ಪ, ತಾಯಿ, ಸಹೋದರಿ ಮತ್ತು ಇನ್ನೊಬ್ಬ ವ್ಯಕ್ತಿಯ ವಿರುದ್ಧ ಐಪಿಸಿ ಸೆಕ್ಷನ್ 406 ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಈ ಕುರಿತು ತನಿಖೆ ಆರಂಭಿಸಲಾಗಿದೆ ಎಂದು ಎಎಸ್‌ಪಿ ಶಶಿ ಶೇಖರ್ ಸಿಂಗ್ ತಿಳಿಸಿದ್ದಾರೆ.
ತನ್ನ ಕುಟುಂಬದವರಿಂದ ಬೆದರಿಕೆ ಎದುರಿಸುತ್ತಿರುವುದಾಗಿ ಇದೀಗ ವಿವಾಹಿತ ಮಹಿಳೆ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.
'ನ್ಯಾಯಾಲಯದ ಆದೇಶದ ಮೇರೆಗೆ ಸರ್ಕಾರ ಮತ್ತು ಎನ್‌ಜಿಒಗಳು ನೀಡಿದ್ದ ಹಣವನ್ನು ನನ್ನ ಖರ್ಚಿಗೆ ಕೇಳಿದಾಗ, ನನ್ನ ಚಿಕ್ಕಪ್ಪ ಪ್ರಕರಣಕ್ಕೆ 7 ಕೋಟಿ ರೂಪಾಯಿ ಖರ್ಚು ಮಾಡಲಾಗಿದ್ದು, ಬಂದಿರುವ ಹಣ ಸಾಕಾಗುವುದಿಲ್ಲ ಎಂದು ಹೇಳಿದರು' ಎಂದು ಅವರು ಆರೋಪಿಸಿದರು.
ಆಕೆಯ ಚಿಕ್ಕಪ್ಪ ಕೊಲೆ ಯತ್ನ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿ 10 ವರ್ಷ ಶಿಕ್ಷೆ ಅನುಭವಿಸುತ್ತಿದ್ದಾರೆ. ಅವರ ಸೂಚನೆ ಮೇರೆಗೆ ನನ್ನ ತಾಯಿ ಮತ್ತು ಸಹೋದರಿ ನನ್ನ ಮತ್ತು ನನ್ನ ಗಂಡನ ಜೀವನಕ್ಕೆ ಶತ್ರುಗಳಾಗಿದ್ದಾರೆ. ಸರ್ಕಾರದಿಂದ ಪಡೆದ ಮನೆಯಿಂದ ತನ್ನನ್ನು ಮತ್ತು ತನ್ನ ಪತಿಯನ್ನು ಹೊರಹಾಕಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಉನ್ನಾವೋದಲ್ಲಿ ನಡೆದ ಅತ್ಯಾಚಾರ ಪ್ರಕರಣದಲ್ಲಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರಿಗೆ ಶಿಕ್ಷೆಯಾಗುವಲ್ಲಿ ಸಂತ್ರಸ್ತೆಯ ಚಿಕ್ಕಪ್ಪ ಪ್ರಮುಖ ಪಾತ್ರ ವಹಿಸಿದ್ದರು.
ಇದೀಗ, ಸಂತ್ರಸ್ತೆ ಜೈಲಿನಲ್ಲಿರುವ ತನ್ನ ಚಿಕ್ಕಪ್ಪನ ವಿರುದ್ಧ ಗಂಭೀರ ಆರೋಪ ಮಾಡಿದ್ದು, ತನ್ನ ಪತಿ ಮತ್ತು ತನಗೆ ಕುಟುಂಬ ಸದಸ್ಯರಿಂದ ಬೆದರಿಕೆ ಇದೆ ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


