ಮದುವೆಯಾಗಲು ನಿರಾಕರಣೆ: ಪ್ರಿಯಕರನನ್ನು ಕೊಡಲಿಯಿಂದ ಕೊಚ್ಚಿ ಕೊಂದ ಯುವತಿ!
ಮದುವೆಯಾಗಲು ನಿರಾಕರಿಸಿದ ಪ್ರಿಯಕರನನ್ನು 20 ವರ್ಷದ ಯುವತಿಯೊಬ್ಬಳು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾಳೆ.ಜಾರ್ಖಂಡ್‌ನ ಪಲಾಮು ಜಿಲ್ಲೆಯ ಪಟಾನ್ ಪೊಲೀಸ್ ಠಾಣೆ ವ್ಯಾಪ್ತಿಯ ಕೊಲ್ಹುವಾ ಗ್ರಾಮದ ಬಳಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಾರ್ಖಂಡ್: ಮದುವೆಯಾಗಲು ನಿರಾಕರಿಸಿದ ಪ್ರಿಯಕರನನ್ನು 20 ವರ್ಷದ ಯುವತಿಯೊಬ್ಬಳು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾಳೆ.ಜಾರ್ಖಂಡ್‌ನ ಪಲಾಮು ಜಿಲ್ಲೆಯ ಪಟಾನ್ ಪೊಲೀಸ್ ಠಾಣೆ ವ್ಯಾಪ್ತಿಯ ಕೊಲ್ಹುವಾ ಗ್ರಾಮದ ಬಳಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಂಜಲಿ ಕುಮಾರ್ ಬಂಧಿತ ಯುವತಿಯಾಗಿದ್ದು, ಆಕೆಯ ರಕ್ತದ ಕಲೆಯುಳ್ಳ ಸಲ್ವಾರ್-ಕಮೀಜ್ ಮತ್ತು ಕೊಲೆಗೆ ಬಳಸಿದ ಕೊಡಲಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಉಪವಿಭಾಗದ ಪೊಲೀಸ್ ಅಧಿಕಾರಿ ಸುರ್ಜೀತ್ ಕುಮಾರ್ ತಿಳಿಸಿದ್ದಾರೆ.
ಧರ್ಮೆನ್ ಓರಾನ್ (24) ಎಂಬಾತನೊಂದಿಗೆ ಸಂಬಂಧ ಹೊಂದಿದ್ದ ಅಂಜಲಿ ಆತನನನ ಮದುವೆಯಾಗಲು ಬಯಸಿದ್ದಳು. ಆದರೆ, ಆತ ಪ್ರಪೋಸ್ ನಿರಾಕರಿಸಿದ್ದ. ಇದರಿಂದ ಆತಂಕಗೊಂಡ ಅಂಜಲಿ ಕೊಲೆಗೆ ಸ್ಕೆಚ್ ರೂಪಿಸಿದ್ದು, ಶನಿವಾರ ಪೊದೆಗಳಿಂದ ಆವೃತವಾದ ಏಕಾಂತ ಸ್ಥಳಕ್ಕೆ ಧರ್ಮೆನ್ ನನ್ನು ಕರೆಸಿದ್ದಳು. ಸ್ವಲ್ಪ ಹೊತ್ತು ಹರಟೆ ಹೊಡೆದ ನಂತರ ಆತನ ನೆಲದ ಮೇಲೆ ನಿದ್ದೆಗೆ ಜಾರಿದಾಗ ತನ್ನ ಬಳಿ ಇಟ್ಟುಕೊಂಡಿದ್ದ ಕೊಡಲಿಯಿಂದ ಹೊಡೆದು ಹತ್ಯೆ ಮಾಡಿದ್ದಳು. ಬಳಿಕ ಮೃತದೇಹವನ್ನು ಪೊದೆಗೆ ಎಸೆದು ಪರಾರಿಯಾಗಿದ್ದಳು ಎಂದು ಪೊಲೀಸರು ವಿವರಿಸಿದ್ದಾರೆ.
ಭಾನುವಾರ ಸ್ಥಳೀಯರು ಮೃತದೇಹವನ್ನು ಪತ್ತೆ ಮಾಡಿದ್ದಾರೆ. 48 ಗಂಟೆಗಳಲ್ಲಿ ಪ್ರಕರಣವನ್ನು ಭೇದಿಸಿ, ಆರೋಪಿಯನ್ನು ಬಂಧಿಸುವುದರ ಜೊತೆಗೆ ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


