ಕೆಂಪುಕೋಟೆಯಲ್ಲಿ'ರಾವಣ ಪ್ರತಿಕೃತಿ ದಹನ' ಮಾಡಿದ ಬಾಲಿವುಡ್ ನಟಿ ಕಂಗನಾ ರಣಾವತ್!
ವಿಜಯದಶಮಿ ಅಂಗವಾಗಿ ಮಂಗಳವಾರ ದೇಶದ ಹಲವೆಡೆ 'ರಾವಣ ದಹನ' ಕಾರ್ಯಕ್ರಮ ನಡೆಯಿತು. ರಾಷ್ಟ್ರ ರಾಜಧಾನಿಯ ಕೆಂಪು ಕೋಟೆಯಲ್ಲಿ ಲವಕುಶ ರಾಮಲೀಲಾ ಸಮಿತಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಾಲಿವುಡ್ ನಟಿ ಕಂಗನಾ ರಣಾವತ್ ರಾವಣ ಪ್ರತಿಕೃತಿ ದಹನ ಮಾಡಿದರು.

ನವದೆಹಲಿ: ವಿಜಯದಶಮಿ ಅಂಗವಾಗಿ ಮಂಗಳವಾರ ದೇಶದ ಹಲವೆಡೆ 'ರಾವಣ ದಹನ' ಕಾರ್ಯಕ್ರಮ ನಡೆಯಿತು. ರಾಷ್ಟ್ರ ರಾಜಧಾನಿಯ ಕೆಂಪು ಕೋಟೆಯಲ್ಲಿ ಲವಕುಶ ರಾಮಲೀಲಾ ಸಮಿತಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಾಲಿವುಡ್ ನಟಿ ಕಂಗನಾ ರಣಾವತ್ ಶ್ರೀರಾಮ್ ಘೋಷಣೆಯೊಂದಿಗೆ ರಾವಣ ಪ್ರತಿಕೃತಿ ದಹನ ಮಾಡಿದರು.
ಕೆಂಪುಕೋಟೆಯಲ್ಲಿ 50 ವರ್ಷದಿಂದ ರಾವಣ ಪ್ರತಿಕೃತಿ ದಹನ ಕಾರ್ಯಕ್ರಮ ನಡೆಯುತ್ತಿದ್ದು, ಇದೇ ಮೊದಲ ಬಾರಿಗೆ ಮಹಿಳೆಯಾಗಿ ರಣಾವತ್ ಬಾಣ ಬಿಡುವ ಮೂಲಕ ರಾವಣ ಪ್ರತಿಕೃತಿ ದಹಿಸಿದರು. ಹಲವು ಮಂದಿ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಳೆದ ವರ್ಷ ಟಾಲಿವುಡ್ ನಟ ಪ್ರಭಾಸ್ ರಾವಣ ಪ್ರತಿಕೃತಿ ದಹನ ಮಾಡಿದ್ದರು.
ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ನಡೆದ ರಾವಣ ದಹನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖ್ ಪಾಲ್ಗೊಂಡರು. ಬಾಣ ಬಿಡುವ ಮೂಲಕ ರಾವಣ ಪ್ರತಿಕೃತಿ ಸಂಹಾರ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


