ಗುಜರಾತ್: 10 ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮದ್ರಸಾ ಶಿಕ್ಷಕನ ಬಂಧನ
ಗುಜರಾತ್‌ನ ಜುನಾಗಢ್ ಜಿಲ್ಲೆಯ ಮದ್ರಸಾವೊಂದರಲ್ಲಿ ಕನಿಷ್ಠ 10 ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ(ಗುದ ಸಂಭೋಗ) ಎಸಗಿದ ಆರೋಪದ ಮೇಲೆ 25 ವರ್ಷದ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು...

ಜುನಾಗಢ್: ಗುಜರಾತ್‌ನ ಜುನಾಗಢ್ ಜಿಲ್ಲೆಯ ಮದ್ರಸಾವೊಂದರಲ್ಲಿ ಕನಿಷ್ಠ 10 ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ(ಗುದ ಸಂಭೋಗ) ಎಸಗಿದ ಆರೋಪದ ಮೇಲೆ 25 ವರ್ಷದ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಶಿಕ್ಷಕನನ್ನು ಮೌಲಾನಾ ಎಂದು ಗುರುತಿಸಲಾಗಿದ್ದು, ಈ ಶಿಕ್ಷಕನ ವಿರುದ್ಧ ವಿದ್ಯಾರ್ಥಿಗಳು ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳದ ಆರೋಪದ ಮೇಲೆ ಮದ್ರಸಾದ 55 ವರ್ಷದ ಟ್ರಸ್ಟಿಯನ್ನು ಸಹ ಪೊಲೀಸರು ಬಂಧಿಸಿದ್ದಾರೆ ಎಂದು ಜುನಾಗಢ್ ಜಿಲ್ಲಾ ಪೊಲೀಸರು ಸೋಮವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನು ಓದಿ: ಬೆಂಗಳೂರು: 20 ವರ್ಷದ ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ರ್ಯಾಪಿಡೋ ಚಾಲಕ; ಪ್ರಕರಣ ದಾಖಲು
ಸೂರತ್‌ನಲ್ಲಿ ಶಿಕ್ಷಕನನ್ನು ಬಂಧಿಸಿದ ನಂತರ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದ ಮದ್ರಸಾ ಟ್ರಸ್ಟಿಯನ್ನು ಭಾನುವಾರ ಜುನಾಗಢ್‌ದಲ್ಲಿ ಬಂಧಿಸಲಾಯಿತು ಎಂದು ಪ್ರಕಟಣೆ ತಿಳಿಸಿದೆ.
17 ವರ್ಷದ ಬಾಲಕ ನೀಡಿದ ದೂರಿನ ಆಧಾರದ ಮೇಲೆ ಮ್ಯಾಂಗ್ರೋಲ್ ಪೊಲೀಸರು ಈ ಇಬ್ಬರು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 377(ಅಸ್ವಾಭಾವಿಕ ಸಂಭೋಗ), 323(ಹಲ್ಲೆ), 506-2 (ಅಪರಾಧ ಬೆದರಿಕೆ) ಅಡಿಯಲ್ಲಿ ಭಾನುವಾರ ಎಫ್‌ಐಆರ್ ದಾಖಲಿಸಿದ್ದಾರೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯಿದೆ ಅಡಿ ಕೇಸ್ ದಾಖಲಿಸಲಾಗಿದೆ.
ಮಂಗ್ರೋಲ್-ವೆರಾವಲ್ ಬೈಪಾಸ್‌ನಲ್ಲಿರುವ ವಸತಿ ಶಾಲೆಯ ವಿದ್ಯಾರ್ಥಿಯೊಬ್ಬ ಕೆಲ ದಿನಗಳ ಹಿಂದೆ ಮತ್ತೊಬ್ಬರ ಮೊಬೈಲ್‌ನಿಂದ ತನ್ನ ತಾಯಿಗೆ ಕರೆ ಮಾಡಿ ಶಿಕ್ಷಕನ ಲೈಂಗಿಕ ಹಾವಭಾವ ಮತ್ತು ವಿದ್ಯಾರ್ಥಿಗಳೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವ ಬಗ್ಗೆ ದೂರು ನೀಡಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಕ್ಟೋಬರ್ 21 ರಂದು ಪೊಲೀಸರು ವಸತಿ ಶಾಲೆಗೆ ಭೇಟಿ ನೀಡಿ, ಕೆಲವು ಮುಸ್ಲಿಂ ಮುಖಂಡರ ಸಹಾಯದಿಂದ ವಿದ್ಯಾರ್ಥಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ವಿಚಾರಿಸಿದಾಗ, ಮದರಸಾದಲ್ಲಿ ಓದುತ್ತಿರುವ 10 ಹುಡುಗರು ಮುಂದೆ ಬಂದು ಆರೋಪಿ ಶಿಕ್ಷಕ ತಮ್ಮೊಂದಿಗೆ ಗುದ ಸಂಭೋಗ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ ಮತ್ತು ಈ ವಿಚಾರ ಪೋಷಕರಿಗೆ ಅಥವಾ ಹೊರಗಿನವರಿಗೆ ಹೇಳಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


